ತುಮಕೂರು

ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ: ಕೆ.ಷಡಕ್ಷರಿ

Published On :

ಕ.ಪ್ರ.ವಾರ್ತೆ   ತಿಪಟೂರು   ಜ.20
ಸರ್ಕಾರವು ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಠಾಗೂರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಸಮಾರಂಭವನ್ನು  ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಈ ಯೋಜನೆಯ ಜೊತೆಗೆ ಕ್ಷೀರಭಾಗ್ಯ, ಅಕ್ಷರ ದಾಸೋಹ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಿಗೆ ಅನೂಕಲವಾಗುವ ದೃಷ್ಟಿಯಿಂದ. ಈ ನಿಟ್ಟಿನಲ್ಲಿ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕು. ಈ ಶಾಲೆಯ ಅಧ್ಯಕ್ಷರಾದ ಬಿ.ಡಿ. ರಾಮಯ್ಯನವರು ಶಿಸ್ತಿನ ಸಿಪಾಯಿಗಳಂತೆ ಕಾರ್ಯನಿರ್ವಹಿಸುವ ಜೊತೆಗೆ ಶಾಲೆಯು ಶಿಸ್ತಿನಿಂದ ಬೆಲೆಯುತ್ತಿರುವುದ ಸಂತೋಷದ ಸಂಗತಿ ಎಂದರು.
ಬಿಇಓ ಪ್ರಭುಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ನಗರಸಭಾ ಸದಸ್ಯ ಲಿಂಗರಾಜು, ನಿವೃತ್ತ ಪ್ರಾಂಶುಪಾಲ ಷಣ್ಮುಖಪ್ಪ, ಮುಖ್ಯ ಶಿಕ್ಷಕಿಯರಾದ ಬಿ.ಸಿ.ಗೀತಾ, ಶಶಿಕಲಾ ಮತ್ತಿತರರಿದ್ದರು. ಶಿಕ್ಷಕಿ ಶಿವಗಂಗಾ ಸ್ವಾಗತಿಸಿ, ತಿಪ್ಪೂರಯ್ಯ ನಿರೂಪಿಸಿ, ಶಿಕ್ಷಕ ವಿನಯ್ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.