ರಾಹುಲ್ ಗಾಂಧಿ ಕೈ ಬಲಪಡಿಸಲು ಯುವ ಕಾಂಗ್ರೆಸ್ಸಿಗರ ಶ್ರಮ ಅಗತ್ಯ'
ತುರುವೇಕೆರೆ: ರಾಹುಲ್ ಗಾಂಧಿ ದೇಶದ ಆಶಾಕಿರಣವಾಗಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದ್ದು ಅವರು ಪಕ್ಷದ ಪ್ರಧಾನಿ ಅಭ್ಯರ್ಥಿ. ಆದ್ದರಿಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಯುಪಿಎ ಸರ್ಕಾರದ ಸಾಧನೆಗಳನ್ನು ಮನೆ ಮನೆ ಬಾಗಿಲಿಗೆ ತಲುಪಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳಬೇಕು ಎಂದು ಕಾಂಗ್ರೆಸ್ನ ಯುವ ಮುಖಂಡ ಬಿ.ಎಸ್. ವಸಂತ್ ಕುಮಾರ್ ಕರೆ ನೀಡಿದರು.
ಪಟ್ಟಣದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾದಿಕಾರಿಗಳನ್ನು ಅಭಿನಂದಿಸಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಯುವಕರನ್ನು ಜಾಗೃತಿಗೊಳಿಸಿದ ಕೀರ್ತಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ. ಯುವಕರಿಗೆ ಅವರು ನೀಡಿದ ಔದ್ಯೋಗಿಕ ಅವಕಾಶಗಳು ಬಹಳ. ಯುವಕರನ್ನು ಸಮಾಜಮುಖಿಯನ್ನಾಗಿಸಿದ ರಾಜೀವ್ ಗಾಂಧಿಯವರ ಪುತ್ರರಾದ ರಾಹುಲ್ ಗಾಂಧಿಯವರೂ ಯುವಕರ ಆದರ್ಶನೀಯ ವ್ಯಕ್ತಿಯಾಗಿದ್ದಾರೆ. ದೂರದೃಷ್ಟಿಯುಳ್ಳ ರಾಹುಲ್ರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುವುದರಿಂದ ಯುವಕರು ಸ್ವಯಂ ಪೂರ್ತಿಯಿಂದ ಕಾಂಗ್ರೆಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ. ಯುವಕರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳುವುದರಿಂದ ಹಿರಿಯ ಕಾಂಗ್ರೆಸ್ಸಿಗರಿಗೆ ಒಳಿತಾಗಲಿದೆ ಎಂದರು.
ತಾಲೂಕು ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಗೋಣಿತುಮಕೂರಿನ ಜಿ.ಆರ್. ನಂದೀಶ್ ಕುಮಾರ್, ಉಪಾಧ್ಯಕ್ಷರಾಗಿ ಕೆ. ಕಲ್ಲಹಳ್ಳಿಯ ಧನಂಜಯ, ಕಾರ್ಯದರ್ಶಿಯಾಗಿ ಕೊಡಗೀಹಳ್ಳಿಯ ಎಚ್.ಮಂಜುನಾಥ್ ಹಾಗೂ ಗೂರಲಮಠದ ಈಶ್ವರ್ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಬಿ.ಹನುಮಂತಯ್ಯ, ತಾಲೂಕು ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಮಾಯಸಂದ್ರ ಸುಬ್ರಹ್ಮಣ್ಯ, ಜೈಗಿರಿ ಸುಂದರ್ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

