ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದರೆ ಕ್ರಮ
ಪಾವಗಡ: ಅಧಿಕಾರಿಗಳ ಮೇಲೆ ವಿನಾ ಕಾರಣ ಹಲ್ಲೆ ಹಾಗೂ ದೌರ್ಜನ್ಯ ಮಾಡಿದರೆ ಕಾನೂನು ಕ್ರಮಕ್ಕೆ ಶಿಫಾರಸು ಮಾಡುವುದಾಗಿ ತಹಸೀಲ್ದಾರ್ ಮಹಮ್ಮದ್ ಅಲ್ತಾಫ್ ಪಾಷ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ವಿರಪಸಮುದ್ರ ಗ್ರಾಪಂ ಕಾರ್ಯದರ್ಶಿ ಇ.ಶಿವರಾಜ್ ಅವರ ಮೇಲೆ ನಡೆದ ದೌರ್ಜನ್ಯ ಹಾಗೂ ಹಲ್ಲೆ ಹಿನ್ನೆಲೆಯಲ್ಲಿ ಬುಧವಾರ ತಾ.ಸರ್ಕಾರಿ ನೌಕರರ ಸಂಘದ ವತಿಯಿಂದ ತಾಪಂ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾರ್ಯದರ್ಶಿ ಇ.ಶಿವರಾಮ್ ಅವರ ಮೇಲೆ ನಡೆದ ಹಲ್ಲೆ ಖಂಡನೀಯ. ದಾಖಲೆ ಪರಿಶೀಲಿಸಿದ್ದು ಜೆಸಿಬಿ ಹಾಗೂ ಟ್ರಾಕ್ಟರ್ ಇರುವ ಶ್ರೀಮಂತರಿಗೆ ಬಿಪಿಎಲ್ ಕಾರ್ಡು ನೀಡಲು ನಿರಾಕರಿಸಿರುವುದು ಅವರ ಪ್ರಾಮಾಣಿಕತೆ ತೋರುತ್ತದೆ. ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಜನರು ಸಮಸ್ಯೆ ಇದ್ದರೆ ಸಂಬಂಧಪಟ್ಟವರಿಗೆ ದೂರು ನೀಡಲಿ. ಈ ರೀತಿ ಅಧಿಕಾರಿಗಳ ಮೇಲೆ ದೌರ್ಜನ್ಯವೆಸಗಿದರೆ ಕಾನೂನು ರೀತಿ ಶಿಕ್ಷೆಗೆ ಗುರಿಪಡಿಸುವುದಾಗಿ ಅವರು ಎಚ್ಚರಿಸಿದರು. ತಾಪಂ ಇಒ ತಿಪ್ಪೇಸ್ವಾಮಿ ಮಾತನಾಡಿ, ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚರ ವಹಿಸುವ ಅಗತ್ಯವಿದೆ. ತಪ್ಪಿತಸ್ಥರು ಯಾರೇ ಆಗಲಿ ಶಿಕ್ಷೆ ಆಗಬೇಕು ಎಂದರು. ತಾ.ನೌಕರರ ಸಂಘದ ಅಧ್ಯಕ್ಷ ಚೌಧರಿ ಮಾತನಾಡಿ, ಅಧಿಕಾರಿಗಳ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ ಸರಿಯಲ್ಲ. ತಹಸಾಲ್ದಾರ್ ಪಾಷ ಹಾಗೂ ತಾಪಂ ಇಒ ತಿಪ್ಪೇಸ್ವಾಮಿ ನೇತ್ರತ್ವದಲ್ಲಿ ತಾ.ಆಡಳಿತ ಸುಗಮವಾಗಿ ನಡೆಯುತ್ತಿದೆ ಎಂದರು.
ಅಭಿವೃದ್ಧಿ ಅಧಿಕಾರಿ ಜಯರಾಮ್ ಮಾತನಾಡಿ, ಅಭಿವೃದ್ಧಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಪಂಚಾಯಿತ್ ರಾಜ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

