ಆರ್ಥಿಕವಾಗಿ ಸದೃಢರಿಗೆ ಸಾಲ ಸವಲತ್ತು: ಶಾಸಕರ ವಿಷಾದ
ಗುಬ್ಬಿ: ಕಡು ಬಡವರು ಮತ್ತು ಶೋಷಿತರ ಪಾಲಿಗೆ ವರದಾನವಾಗಬೇಕಾಗಿದ್ದ ಸಹಕಾರ ಸಂಘಗಳು ಇತ್ತೀಚಿನ ದಿನಗಳಲ್ಲಿ ಆರ್ಥಿಕವಾಗಿ ಸದೃಢವಾದವರಿಗೆ ಸಾಲ ಸೌಲಭ್ಯ ಹಾಗೂ ಸರ್ಕಾರದ ಸವಲತ್ತುಗಳನ್ನು ನೀಡುತ್ತಿರುವುದು ವಿಷಾದಕರ ಸಂಗತಿ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಇಂದಿರಾ ಕಲ್ಯಾಣ ಮಂಟಪದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸೇವಾ ಸಂಘ ಮತ್ತು ತಾಲೂಕು ಗಿರಿಜನ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರೀಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘ ಪ್ರಾರಂಭೋತ್ಸವ ಹಾಗೂ 2014 ರ ದಿನಚರಿ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಸಹಕಾರ ಸಂಘಗಳ ಮೂಲಕವೇ ಅನುಷ್ಠಾನಗೊಳಿಸುತ್ತಿದೆ. ಆದರೆ ಸಹಕಾರ ಸಂಘಗಳು ಅರ್ಹ ಫಲಾನುಭವಿಗಳಿಗೆ ತಲುಪಿಸದೆ ಉಳ್ಳವರಿಗೆ ಸೌಲಭ್ಯಗಳನ್ನು ನೀಡುತ್ತಿರುವುದು ಸಾಮಾನ್ಯವಾಗಿದೆ. ಮುಂಬರುವ ದಿನಗಳಲ್ಲಿ ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢರಾದವರಿಗೆ ನೆರವು ನೀಡುವುದನ್ನು ಬಿಟ್ಟು ಬಡವರು ಮತ್ತು ಶೋಷಿತ ವರ್ಗಗಳಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಹಿಂದುಳಿದ ವರ್ಗವನ್ನು ಸಮಾಜದ ಮುಖ್ಯವಾಹಿನಿಗೆ ತರುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು.
ಕಾಂಗ್ರೇಸ್ ಮುಖಂಡರು ವಿ.ಎಸ್.ಉಗ್ರಪ್ಪ ಮಾತನಾಡಿ ರಾಜ್ಯದ ಬಹುತೇಕ ಸಹಕಾರಿ ಸಂಘಗಳು ಸರ್ವಾಧಿಕಾರಿಗಳಂತೆ ಕೆಲಸ ಮಾಡುತ್ತಿದ್ದು ಸಂಘಗಳ ವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಳಪಡಿಸಿದರೆ ಬಹಳಷ್ಟು ಸಂಘಗಳ ಪದಾಧಿಕಾರಿಗಳು ಜೈಲುಪಾಲಾಗಲಿದ್ದಾರೆ ಎಂದರು.
ಸಮಾರಂಭದ ಸಾನಿಧ್ಯ ವಹಿಸಿದ್ದ ಶಿಡ್ಲೇಕೋಣ ವಾಲ್ಮೀಕಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀವಾಲ್ಮೀಕಿ ಸಂಜಯಕುಮಾರ ಮಹಾಸ್ವಾಮೀಜಿ ಮಾತನಾಡಿದರು.
ಪ್ರಾಚಾರ್ಯ ಎಚ್.ಕೆ.ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ ಸಮಾಜ ಸೇವೆ ಮಾಡುವ ಸದುದ್ದೇಶದಿಂದ ಸಹಕಾರ ಬ್ಯಾಂಕ್ನ್ನು ಪ್ರಾರಂಭಿಸಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಡಿ.ಸುರೇಶ್ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು, ತಾಲೂಕು ಜೆಡಿಎಸ್ ಅಧ್ಯಕ್ಷ ಗುರುರೇಣುಕಾರಾಧ್ಯ, ಮಹರ್ಷಿ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಡಿ.ದೇವರಾಜು, ಗಿರಿಜನ ನೌಕರರ ಸಂಘದ ಅಧ್ಯಕ್ಷ ಮಂಜುರಾಜ್, ನಾಯಕ ಸಂಘದ ಮಾಜಿ ಅಧ್ಯಕ್ಷ ಎಚ್.ಡಿ.ಯಲ್ಲಪ್ಪ, ಸಂಘದ ಗೌರವಾಧ್ಯಕ್ಷ ಎ. ನರಸಿಂಹಮೂರ್ತಿ, ಯಜಮಾನ್ ಶಿವಣ್ಣ, ಮುಖಂಡರಾದ ರಾಮಚಂದ್ರಯ್ಯ, ರಂಗಸ್ವಾಮಯ್ಯ, ಸಂಘದ ಪದಾಧಿಕಾರಿಗಳಾದ ನಾಗರಾಜು, ಎನ್.ಎಚ್.ಕೃಷ್ಣಯ್ಯ, ನಾಗರಾಜು, ಲಕ್ಷ್ಮೀರಂಗಯ್ಯ, ಉಮೇಶ್, ಅಣ್ಣಪ್ಪಸ್ವಾಮಿ, ಕುಮಾರ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

