ತುಮಕೂರು

ನಾಳೆ ವೀರಣ್ಣ ಟ್ರಸ್ಟ್ಗೆ ಚಾಲನೆ

Published On :

ಗುಬ್ಬಿ: ನಾಟಕರತ್ನ ಡಾ. ವೀರಣ್ಣ ಅವರ 124ನೇ ಜನ್ಮ ದಿನವಾದ ಜ.24ರಂದು ಅವರ ಹೆಸರಿನಲ್ಲಿ ರಾಜ್ಯ ಮಟ್ಟದ ಟ್ರಸ್ಟ್ ಪ್ರಾರಂಭಿಸಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಕೆ.ಎಸ್.ಸತ್ಯಮೂರ್ತಿ ತಿಳಿಸಿದರು.
ಗುಬ್ಬಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ವೀರಣ್ಣ ರಂಗಮಂದಿರ ಕಟ್ಟಡದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.24ರಂದು ಮದ್ಯಾಹ್ನ 3ಕ್ಕೆ ಡಾ.ಗುಬ್ಬಿ ವೀರಣ್ಣ ಅವರ ಪ್ರತಿಮೆ ಮೆರವಣಿಗೆ ನಡೆಸಲಾಗುವುದು. ಸಂಜೆ 6ಕ್ಕೆ ರಂಗ ಸಂಗೀತ ಸೌರಭ ಕಾರ್ಯಕ್ರಮವನ್ನು ಬಿ.ಜಯಶ್ರೀ, ಆರ್.ಪರಮಶಿವನ್, ಡಾ.ಲಕ್ಷ್ಮಣದಾಸ್ ನಡೆಸಿಕೊಡುವರು ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯೆ ಬಿ.ಜಯಶ್ರೀ ಮಾತನಾಡಿ, ರಾಜ್ಯ ಮಟ್ಟದ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ಅನ್ನು ಹಿರಿಯ ರಂಗಭೂಮಿ ಕಲಾವಿದ ಆರ್.ಪರಮಶಿವನ್ ಉದ್ಘಾಟಿಸವರು. ಶಾಸಕ ಎಸ್.ಆರ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವೆ ಉಮಾಶ್ರೀ, ವಿಧಾನ ಪರಿಷತ್ ಸದಸ್ಯ ಡಾ.ಎ.ಎಚ್.ಶಿವಯೋಗಿಸ್ವಾವು, ಸಂಸದ ಜಿ.ಎಸ್.ಬಸವರಾಜು, ಜಿಪಂ ಅಧ್ಯಕ್ಷೆ ಸಾಕಮ್ಮ ಸೇರಿದಂತೆ ಹಲವು ಗಣ್ಯರು ಹಾಗೂ ರಂಗ ಕಲಾವಿದರು ಇರುತ್ತಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.