ತುಮಕೂರು

ಕಷ್ಟಕ್ಕೆ ಅಂಜದೆ ಧೈರ್ಯದಿಂದ ಎದುರಿಸಲು ಕರೆ

Published On :

ತುಮಕೂರು: ಮಕ್ಕಳು ಎಂಥದ್ದೇ ಕಷ್ಟ ಬಂದರೂ ಎದೆಗುಂದದೆ ಧೈರ್ಯದಿಂದ ಸವಾಲುಗಳನ್ನು ಎದುರಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಕರೆ ನೀಡಿದರು.
ಅವರು ತುಮಕೂರಿನ ಎಂಪ್ರೆಸ್ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಬದುಕಿನಲ್ಲಿ ಕಷ್ಟ ಬರುವುದು ಸಹಜ. ಆದರೆ ಕಷ್ಟಕ್ಕೆ ಹೆದರಿ ಬದುಕಿಗೆ ಬೆನ್ನು ತಿರುಗಿಸುವ ಬದಲು ಧೈರ್ಯದಿಂದ ಮುನ್ನಗ್ಗಬೇಕು. ಒಂದು ವೇಳೆ ಮಕ್ಕಳಿಗೆ ಪೊಲೀಸ್ ಸಹಾಯ ಬೇಕಾದರೆ ತಾವು ಕೊಡಲು ಸಿದ್ಧ ಎಂದರು.
ಮುರುಳಿಕೃಷ್ಣ ಮಾತನಾಡಿ, ಮಕ್ಕಳಿಗಾಗಿ ಹೆತ್ತವರು ಈ ದಿನಗಳಲ್ಲಿ ತುಂಬಾ ಕಷ್ಟ ಪಡುತ್ತಿದ್ದು, ಮಕ್ಕಳು ಅವರ ಋಣವನ್ನು ತೀರಿಸಬೇಕಾದರೆ ಉತ್ತಮ ನಾಗರಿಕರಾಗುವುದು ಅವಶ್ಯಕ ಎಂದರು. ಬಾಲ ನ್ಯಾಯ ಮಂಡಳಿ ಸದಸ್ಯೆ ಸುಕನ್ಯಾ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸವಲತ್ತುಗಳ ಕೊರತೆಯ ಮಧ್ಯೆಯೂ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ತರುವಲ್ಲಿ ಮಕ್ಕಳೇ ಮುಖ್ಯ ಪಾತ್ರ ವಹಿಸುವುದು ಅನಿವಾರ್ಯವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಜಾತ, ಹೆಣ್ಣು ಗಂಡು ಎಂಬ ಭೇದ ಭಾವವಿಲ್ಲದೆ ಸಮಾನ ಶಿಕ್ಷಣ ನೀಡಿದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣವಾಗುವುದೆಂದು ತಿಳಿಸಿದರು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳಿಂದ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಬಾಲಕಿಯೊಬ್ಬಳ ಜೀವ ರಕ್ಷಿಸಿದ ಆಶಾ ಎಂಬ ಬಾಲಕಿಯ ಧೈರ್ಯ ಹಾಗೂ ಸಮಯ ಪ್ರಜ್ಞೆ ಪ್ರಶಂಸಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾ.ಚಿ.ರಾಜ್ಕುಮಾರ್ ಅವರು ಮಕ್ಕಳಿಗೆ ಬಹುಮಾನ ವಿತರಣೆ ಮಾಡಿ ಇಂತಹ ಕಾರ್ಯಕ್ರಮಗಳು ಭವಿಷ್ಯದಲ್ಲಿ ಸಾಧನೆ ಮಾಡಲು ಮಕ್ಕಳಿಗೆ ಪ್ರೋತ್ಸಾಹ ನೀಡುತ್ತದೆ ಎಂದರು.
ಎಂಪ್ರೆಸ್ ಕಾಲೇಜಿನ ಪ್ರಾಂಶುಪಾಲ ಮರುಳಯ್ಯ ಮಾತನಾಡಿ, ಬದಲಾಗುತ್ತಿರುವ ಸಮಾಜದಲ್ಲಿ ಮಕ್ಕಳ ರಕ್ಷಣೆ ಒಂದು ಸವಾಲಾಗಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಎಚ್ಚರ ವಹಿಸಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಗಣ್ಯರು ತಾವು ಮಕ್ಕಳ ರಕ್ಷಣೆಗೆ ಬದ್ಧರಾಗಿದ್ದೇವೆಂದು ಸಹಿ ಮಾಡುವ ಮೂಲಕ ಸಹಿ ಅಭಿಯಾನಕ್ಕೆ ಚಾಲನೆ ನೀಡಿದರು. ವಾಸಂತಿ ಉಪ್ಪಾರ್ ಸ್ವಾಗತಿಸಿದರು. ರಕ್ಷಣಾಧಿಕಾರಿ ಶಿವಣ್ಣ ನಿರೂಪಿಸಿದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.