ಏಕಾಗ್ರತೆಗೆ ಒಲಿಯುವ ವಿದ್ಯೆ ಪ್ರೊ.ಕೆ.ಟಿ. ಮಂಜುನಾಥ
ಕ.ಪ್ರ.ವಾರ್ತೆ ತುಮಕೂರು ಜ.25
ವಿದ್ಯೆಯನ್ನು ಒಲಿಸಿಕೊಳ್ಳಬೇಕಾದರೆ ಸೋಮಾರಿತನ ತೊರೆದು ಏಕಾಗ್ರತೆ ಮೈಗೂಡಿಸಿಕೊಳ್ಳಿ ಎಂದು ಸಿದ್ಧಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಅಧ್ಯಾಪಕ ಪ್ರೊ.ಕೆ.ಟಿ. ಮಂಜುನಾಥ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಗುಬ್ಬಿ ಬಳಿಯ ಹೇರೂರಿನ ಭೂಮಿ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ನಿರುತ್ಸಾಹ ಬಿಟ್ಟು, ಪಠ್ಯದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಸೇರಿದಂತೆ ಮತ್ತಿತರ ಚಟುವಟಿಗಳಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ಇದರಿಂದ ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ಹೊಮ್ಮಿಸಲು ಇಂದಿನ ದಿನದಲ್ಲಿ ಇಂತಹ ವೇದಿಕೆಗಳು ಅಗತ್ಯ. ವಸ್ತುಪ್ರದರ್ಶನ ಕಾರ್ಯಕ್ರಮಗಳು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪ್ರತಿವರ್ಷ ನಡೆಯಲಿ ಎಂದು ಅವರು ಸಲಹೆ ನೀಡಿದರು.
ಮಕ್ಕಳ ಮನಸ್ಸು ಸೂಕ್ಷ್ಮ ಮತ್ತು ಮೃದುವಾಗಿರುತ್ತದೆ. ಇದನ್ನು ಶಿಕ್ಷಕರು ಅರಿತು ಕೊಂಡು ಹೆಚ್ಚು ಒತ್ತಡ ಹೇರದೆ ಸುಲಭ ಮಾರ್ಗದಲ್ಲಿ ಮಕ್ಕಳನ್ನು ಹೆಚ್ಚು ಕ್ರೀಯಾಶೀಲವಂತರನ್ನಾಗಿ ಮಾಡಿ. ದೇಶದ ಭವಿಷ್ಯತ್ಗಾಗಿ ಮತ್ತು ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಒಳ್ಳೆಯ ವಿದ್ಯಾರ್ಥಿಗಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಮಂಜುನಾಥ್ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯ ಜಿ.ವಿ.ಶಂಕರಪ್ರಸಾದ್ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ರೂಪಿಸಿಕೊಳ್ಳಿ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪುಟಾಣಿ ವಿಜ್ಞಾನ ಸ್ಫರ್ಧಾ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಮತ್ತು ಪದಕಗಳನ್ನು ನೀಡಿ ಗೌರವಿಸಲಾಯಿತು.
ಶಿಕ್ಷಕ ಟಿ. ಶಶಿಕುಮಾರ್ ಸ್ವಾಗತಿಸಿದರು. ಮೆಹನಾಜ್ ಖಾದರಿ ನಿರೂಪಿಸಿದರು. ಶಬಿನಾಸುಲ್ತಾನ್ ವಂದಿಸಿದರು. ಮುಖ್ಯ ಶಿಕ್ಷಕಿ ನಿರ್ಮಲ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

