ತುಮಕೂರು

ದಂಪತಿ ಮೇಲೆ ದುಷ್ಕರ್ಮಿ ಹಲ್ಲೆ ರು. 40 ಸಾವಿರ ನಗದು ಕಳವು

Published On :

ಮಧುಗಿರಿ: ದಿನಸಿ ಅಂಗಡಿ ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿಗಳಿಬ್ಬರ ಮೇಲೆ ದುರ್ಷ್ಕಮಿಯೊಬ್ಬ ಹಣದ ಆಸೆಗೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಆತನ ಬ್ಯಾಗ್ನಲ್ಲಿದ್ದ ಸುಮಾರು ರು. 40 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಧುಗಿರಿಯಲ್ಲಿ ಶುಕ್ರವಾರ ರಾತ್ರಿ ಜರುಗಿದೆ. ಎ.ನಾಗರಾಜು(38) ಈತನ ಪತ್ನಿ ಎಂ.ಎನ್.ಮಾಧವಿ (33) ಹಲ್ಲೆಗೆ ಒಳಗಾಗಿದ್ದು, ಇವರು ಪಟ್ಟಣದ ರಾಘವೇಂದ್ರ ಸ್ವಾಮಿ ದೇವಸ್ಥಾನ ಸಮೀಪ ದಿನಸಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಾರೆ. ಆದರೆ, ಶುಕ್ರವಾರ ರಾತ್ರಿ 9.30.ರ ಸುಮಾರಿನಲ್ಲಿ ಎಂದಿನಂತೆ ವ್ಯಾಪಾರ ಮುಗಿಸಿ ಅಂಗಡಿಗೆ ಬೀಗ ಜಡಿದು ದಂಪತಿ ಮನೆಗೆ ತೆರಳುತ್ತಿದ್ದಾಗ ಏಕಾ ಏಕಿ ದುಷ್ಕರ್ಮಿಯೊಬ್ಬ ಮಚ್ಚಿನಿಂದ ಅಂಗಡಿ ಮಾಲೀಕ ನಾಗರಾಜು ತಲೆಗೆ ಬಲವಾಗಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.