ತುಮಕೂರು

ಕರ್ಣಾಟಕ ಬ್ಯಾಂಕ್ನ 612ನೇ ಎಟಿಎಂ ಕೇಂದ್ರ ಉದ್ಘಾಟನೆ

Published On :

ಕುಣಿಗಲ್:  ಬ್ಯಾಂಕುಗಳ ಗ್ರಾಮಾಂತರ ಪ್ರದೇಶದ ಅಭಿವೃದ್ಧಿ ಹಾಗೂ ಜನತೆಗೆ ಸಾಲಸೌಲಭ್ಯ ಕಲ್ಪಿಸುವ ಜೊತೆಯಲ್ಲಿ ಆರ್ಥಿಕವಾಗಿ ಸ್ವಾವಲಂಬನೆ ನಿಟ್ಟಿನಲ್ಲಿ ಸೂಕ್ತ ಕೌಶಲ್ಯಾಧಾರಿತ ತರಬೇತಿಗಳನ್ನು ಪರಿಣಾಮಕಾರಿಯಾಗಿ ನೀಡಿ, ಸ್ವಾವಲಂಬಿ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಶಾಸಕ ಡಿ.ನಾಗರಾಜಯ್ಯ ತಿಳಿಸಿದರು. ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಕರ್ಣಾಟಕ ಬ್ಯಾಂಕ್ನ 612ನೇ ಎಟಿಎಂ ಕೇಂದ್ರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಬ್ಯಾಂಕುಗಳು ಸಾಲ ನೀಡುವುದು, ಮರುಪಾವತಿಗೆ ಆದ್ಯತೆ ನೀಡುವ ವ್ಯವಸ್ಥೆಯ ಹೊರತಾಗಿಯೂ ಜನತೆಯ ಅದರಲ್ಲೂ ಗ್ರಾಮಾಂತರ ಪ್ರದೇಶದ ಜನತೆಯ ಸರ್ವಾಂಗೀಣ ಅಭಿವೃದ್ಧಿಗೆ ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕಿದೆ ಎಂದರು. ಎಟಿಎಂ ಕೇಂದ್ರಗಳಲ್ಲಿನ ಅಪರಾಧ ಪ್ರಕರಣಗಳು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂತ ಕೃತ್ಯಗಳಾಗಿವೆ ಎಂದು ವಿಷಾದಿಸಿದರು.

ತಿಪಟೂರು: ಉಚಿತ ಸೈಕಲ್ ವಿತರಣೆ

ತಿಪಟೂರು: ಆದಿ ಚುಂಚನಗಿರಿ ಶಾಖಾ ಮಠದ ತಾಲ್ಲೂಕಿನ ದಸರೀಘಟ್ಟ ಶ್ರೀ ಚೌಡೇಶ್ವರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಿಸಲಾಯಿತು.
 ಈ ಸಂದರ್ಭದಲ್ಲಿ ಶಾಖಾ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶಾಸಕ ಕೆ. ಷಡಕ್ಷರಿ, ಕ್ಷೇತ್ರಶಿಕ್ಷಣಾಧಿಕಾರಿ ಬಿ.ಜೆ. ಪ್ರಭುಸ್ವಾಮಿ, ಗ್ರಾ.ಪಂ.ಅಧ್ಯಕ್ಷ ಚಂದ್ರಕಲಾ, ಸದಸ್ಯರಾದ ಮೋಹನ್ಕುಮಾರ್, ವಿವೇಕ, ಪಟೇಲ್ ಚಂದ್ರಪ್ಪ, ಅಶೋಕ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.