ತುಮಕೂರು

ಯೋಜನೆಗಳ ಬಗ್ಗೆ ಜನರಿಗೆ ಅರಿವು ಅಗತ್ಯ: ದೇಶಪಾಂಡೆ

Published On :

ಗುಬ್ಬಿ: ಸರ್ಕಾರದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಮತ್ತು ಅರಿವು ಇಲ್ಲದ ಕಾರಣ ದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 60 ಕೋಟಿ ಜಾಬ್ಕಾರ್ಡ್ ನೋಂದಣಿಯಾಗಿದ್ದು ಕೇವಲ 2.5 ಕೋಟಿಯಷ್ಟು ಕಾರ್ಡ್ಗಳು ಮಾತ್ರ ನವೀಕರಣಗೊಂಡಿವೆ ಎಂದು ಬೆಂಗಳೂರು ಕಾರ್ಮಿಕ ವಿದ್ಯಾ ಮಂಡಳಿಯ ವಿದ್ಯಾಧಿಕಾರಿ ಎಂ.ಆರ್.ದೇಶಪಾಂಡೆ ತಿಳಿಸಿದರು. ತಾಲೂಕಿನ ಸುರುಗೇನಹಳ್ಳಿ  ರಂಗನಾಥಸ್ವಾಮಿ ದೇವಾಲಯದ ಅವರಣದಲ್ಲಿ ಕಾರ್ಮಿಕ ವಿದ್ಯಾ ಮಂಡಳಿ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರದ ಯಾವುದೇ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕಾದರೆ ಜನಸಾಮಾನ್ಯರಿಗೆ ಆ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಇರಬೇಕು. ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವ ಖಾತ್ರಿ ಯೋಜನೆಯು ಮಹತ್ವಪೂರ್ಣವಾದದ್ದು ಎಂದರು.

ವಿದ್ಯಾರ್ಥಿ-ಬಾಲ ಕಲಾವಿದರಿಂದ ಇಂದು ರಸ್ತೆ ಸುರಕ್ಷಾ ಸಪ್ತಾಹ


ತುಮಕೂರು: ವೈಭವದ ಗಣರಾಜ್ಯೋತ್ಸವ ಅಂಗವಾಗಿ ಭಾನುವಾರ ಸಂಜೆ 4 ಗಂಟೆಗೆ ಗುಬ್ಬಿವೀರಣ್ಣ ಕಲಾಕ್ಷೇತ್ರದ ಆವರಣದಲ್ಲಿ ನಗರದ ಜೆ.ಡಿ. ಸ್ಕೂಲ್ ಆಫ್ ಆರ್ಟ್  ವಿದ್ಯಾರ್ಥಿಗಳಿಂದ ಹಾಗೂ ಬಾಲ ಕಲಾವಿದರಿಂದ ರಸ್ತೆ ಸುರಕ್ಷಾ ಸಪ್ತಾಹ ಕುರಿತು ಸ್ಥಳದಲ್ಲಿಯೇ ಚಿತ್ರರಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪರಿವರ್ತನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಎನ್.ಎಲ್. ಉಮಾಶಂಕರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಹೆಬ್ಬಾಕ ಸತೀಶ್, ಸದಾಶಿವ ನಗರದ 10ನೇ ವಾರ್ಡಿನ ಕಸಾಪ ಅಧ್ಯಕ್ಷೆ ಸುಮಹರ್ಷ, ಮಕ್ಕಳಮನೆ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಂಸ್ಥಾಪಕ ಕಾಡಶೆಟ್ಟಿಹಳ್ಳಿ ಸತೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.