ಬಿಎಂಎಸ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ
ಹುಳಿಯಾರು: ಇಲ್ಲಿನ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಆರ್. ಮೂಗೇಶಪ್ಪ ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವ ಕಾರ್ಯಕ್ರವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿ, ದೇಶದ್ಯಾಂತ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದನ್ನು ತಡೆಗಟ್ಟುವ ಕಾರ್ಯವಾಗಬೇಕಿದೆ ಅದಕ್ಕೆ ಇಂದಿನ ಯುವಪೀಳಿಗೆ ಮುಂದೆ ಬರುವ ಮೂಲಕ ನಮ್ಮ ದೇಶವನ್ನು ಭ್ರಷ್ಟಾಚಾರ ಮುಕ್ತ ರಾಷ್ಟ್ರವನ್ನಾಗಿ ರೂಪಿಸಬೇಕು ಎಂದರು. ರಾಷ್ಟ್ರೀಯ ಹಬ್ಬಗಳ ಆಚರಣೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ನಾಡು ನುಡಿಯ ಬಗ್ಗೆ ಗೌರವ ತೋರಿಸುವ ಮೂಲಕ ನಮ್ಮಿಂದಾಗುವ ದೇಶಸೇವೆಯನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು. ಇತಿಹಾಸ ಉಪನ್ಯಾಸಕ ಸೈಯ್ಯದ್ ಇಬ್ರಾಹಿಂ ಮಾತನಾಡಿ, ಸಂವಿಧಾನ ರಚನೆಯಾದ ಬಗೆ ಹಾಗೂ ಅದಕ್ಕಾಗಿ ಶ್ರಮಿಸಿದ ಮಹನೀಯರ ಬಗ್ಗೆ ವಿವರವಾಗಿ ತಿಳಿಸಿದರಲ್ಲದೆ ಅದನ್ನು ಪ್ರಸ್ತುತ ಯಾವ ರೀತಿ ಪಾಲಿಸಬೇಕು ಎಂಬುದನ್ನು ತಿಳಿಸಿದರು. ಕಾಲೇಜಿನ ಸಿಡಿಸಿಯ ನಂದಿಹಳ್ಳಿ ಶಿವಣ್ಣ, ಜಲಾಲ್ ಸಾಬ್, ಉಪನ್ಯಾಸಕರಾದ ಶಿವಯ್ಯ, ಶಂಕರಲಿಂಗಯ್ಯ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

