ಸರ್ವತಂತ್ರ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು: ಶಾಸಕ
ಪಾವಗಡ: ಸರ್ವತಂತ್ರ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರೆಂದ ಶಾಸಕ ಕೆ.ಎಂ. ತಿಮ್ಮರಾಯಪ್ಪ ರಾಷ್ಟ್ರದ ಅಭಿವೃದ್ಧಿ ಮತ್ತು ಏಕತೆಗೆ ಹೋರಾಟ ಮಾಡಬೇಕಿದೆ ಎಂದು ಕರೆ ನೀಡಿದರು.
ತಾಲೂಕು ಆಡಳಿತ ವತಿಯಿಂದ ಭಾನುವಾರ ಪಟ್ಟಣದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎನ್. ತಿಮ್ಮಾರೆಡ್ಡಿ, ಜಿಪಂ ಸದಸ್ಯ ಆರ್.ಸಿ.ಅಂಜಿನಪ್ಪ, ವಕೀಲ ವೆಂಕಟರಾಮರೆಡ್ಡಿ, ಬಿಇಒ ಬಿ.ಪಿ.ನಾಗರಾಜ್ ಮುಂತಾದವರು ಮಾತನಾಡಿ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು.
ಅಧ್ಯಕ್ಷತೆಯನ್ನು ತಹಸೀಲ್ದಾರ್ ಮಹಮ್ಮಹ್ ಅಲ್ತಾಫ್ ಪಾಷ ವಹಿಸಿದ್ದು ವೆಂಕಟರಮಣ, ಜಿಪಂ ಸದಸ್ಯ ನಳಿನಮ್ಮ ಗೋವಿಂದಪ್ಪ, ರೇಖಾ ಅಂಜನೇಯಲು, ಅಲುವೇಲಮ್ಮ ಎಂ.ಕೆ.ನಾರಾಯಣಪ್ಪ, ತಾಪಂ ಅಧ್ಯಕ್ಷೆ ರಾಧಾ ರಾಜ್ಗೋಪಾಲ್, ಇಒ ತಿಪ್ಪೇಸ್ವಾಮಿ, ಜಿಪಂ ಎಇಇ ಅಶೋಕರೆಡ್ಡಿ, ಸಿಪಿಐ ಭಾನುಪ್ರಕಾಶ್, ಪಿಎಸ್ಐ ಅಶೋಕ್ಕುಮಾರ್, ಜಲಾನಯಾನ ಇಲಾಖೆ ಪುಟ್ಟರಂಗಪ್ಪ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ದೈಹಿಕ ಶಿಕ್ಷಣಾಧಿಕಾರಿ ಸಣ್ಣಪ್ಪ ನೆರವೇರಿಸಿದರು.
ಡಾ.ಅಂಬೇಡ್ಕರ್ಗೆ ಅಗೌರವ: ಆಕ್ರೋಶ
ಶಿರಾ: ಗಣರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನದಂದು ದೇಶಕ್ಕಾಗಿ ಹೋರಾಡಿದ ಹುತಾತ್ಮರನ್ನು ಸ್ಮರಿಸಿಕೊಳ್ಳಲಾಗುತ್ತದೆ. ಅದರಲ್ಲಿ ಮುಖ್ಯವಾಗಿ ನಮ್ಮ ದೇಶಕ್ಕೆ ಸಂವಿಧಾನವನ್ನು ಜಾರಿಗೆ ತಂದು, ದೇಶದ ಕಾನೂನು ಸುವ್ಯವಸ್ಥೆಯಲ್ಲಿಟ್ಟವರು ಡಾ.ಬಿ.ಆರ್. ಅಂಬೇಡ್ಕರ್. ಆದರೆ ಇಂದು ನಡೆಯುತ್ತಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸೇವೆಯನ್ನು ಸ್ಮರಿಸುವ ಕೆಲಸವನ್ನು ಇಲ್ಲಿನ ತಾಲೂಕು ಅಡಳಿತ ಮರೆತಿರುವುದು ದುರದೃಷ್ಟಕರ ಎಂದು ರಾಜ್ಯ ಮಾದಿಗ ದಂಡೋರ ಕಾರ್ಯಾಧ್ಯಕ್ಷ ಮಾಗೋಡು ಭೂತರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿರಾ ನಗರದ ಪ್ರವಾಸಿ ಮಂದಿರದ ಪಕ್ಕದಲ್ಲಿರುವ ಅಂಬೇಡ್ಕರ್ ಪಾರ್ಕ್ನಲ್ಲಿ ನಗರಸಭೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಆದರೆ ಈ ಪ್ರತಿಮೆ ಧೂಳು ತುಂಬಿದೆ. ಈ ದೇಶಕ್ಕೆ ಸಂವಿಧಾನ ಬರೆದುಕೊಟ್ಟು ಸಂವಿಧಾನ ಶಿಲ್ಪಿ ಎಂದು ಹೆಸರು ಪಡೆದಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಹಾಕಿರುವ ಹಳೆಯ ಹಾರವನ್ನು ತೆಗೆದು ಹೊಸ ಹಾರ ಹಾಕಿ ಅವರಿಗೆ ಗೌರವ ಸಲ್ಲಿಸುವ ಪ್ರಯತ್ನ ತಾಲೂಕು ಆಡಳಿತದಿಂದ ಆಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

