ವಿವೇಕಾನಂದರ ಆದರ್ಶಗಳು ಇಂದಿಗೂ ಪ್ರಸ್ತುತ: ರಾಜೇಶ್
ತಿಪಟೂರು: ಗೆಲವನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಸ್ಫೂರ್ತಿಯನ್ನಾಗಿ ಪಡೆದುಕೊಳ್ಳುವ ಗುಣವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದು ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಾಜೇಶ್ ಪದ್ಮಾ ತಿಳಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಬಿವಿಪಿ ಮತ್ತು ರೆಡ್ಕ್ರಾಸ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ವಿವೇಕಾನಂದರ ಆದರ್ಶಗಳು ಕೇವಲ ದಿನಾಚರಣೆಗಳಿಗಷ್ಟೇ ಸೀಮಿತವಾಗದೇ ಅವರ ಆದರ್ಶಗಳು ವಿದ್ಯಾರ್ಥಿ ಜೀವನದಲ್ಲಿ ಸ್ಫೂರ್ತಿಯಾಗಬೇಕೆಂದು ತಿಳಿಸಿದರು.
ಪ್ರಾಂಶುಪಾಲ ಡಾ.ಜಯದೇವಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ ದಾರಿತಪ್ಪುತ್ತಿರುವ ಯುವ ಪೀಳಿಗೆಗೆ ವಿವೇಕಾನಂದ ಆರ್ದಶಗಳು ಅತ್ಯಾವಶ್ಯಕವಾಗಿದ್ದು, ಇಂತಹ ಮಹಾಪುರುಷರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮಾನವೀಯತೆಯೆಂಬ ತಳಹದಿಯ ಮೇಲೆ ಮೌಲ್ಯಗಳೆಂಬ
ರತ್ನಗಳನ್ನು ಧರಿಸಿ ಸತ್ಪ್ರಜೆಗಳಾಗಬೇಕೆಂದು ತಿಳಿಸಿದರು. ಉಪನ್ಯಾಸಕರಾದ ಪ್ರೊ.ಈರಯ್ಯ, ಡಾ.ವೆಂಕಟೇಶ್, ಎಬಿವಿಪಿ ಜಿಲ್ಲಾ ಸಂಚಾಲಕ ಹರಿಪ್ರಸಾದ್ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

