ತುಮಕೂರು

ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿಸಲು ಸರ್ವರೂ ಶಕ್ತಿ ಮೀರಿ ಶ್ರಮಿಸಲಿ

Published On :

ಕ,ಪ್ರ,ವಾರ್ತೆ, ಮಧುಗಿರಿ, ಜ.26
ದೇಶವನ್ನು ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ  ನಿರ್ಮಿಸಲು  ಸರ್ವರೂ ಶಕ್ತಿ ಮೀರಿ  ಶ್ರಮಿಸಬೇಕು ಎಂದು ಉಪವಿಭಾಗಾಧಿಕಾರಿ ತಬಸುಮ್ ಜುಹೇರಾ  ಕರೆ ನೀಡಿದರು.
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ತಾ.ಆಡಳಿತ, ತಾಪಂ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಏರ್ಪಾಟಾಗಿದ್ದ ಭಾರತದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ಭಾರತೀಯರೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿ ಗಟ್ಟಿಗೊಳಿಸಲು ಸಂಕಲ್ಪ ಮಾಡುವ ಗಣ ತಂತ್ರ ದಿನ, ಕರ್ನಾಟಕ ಶ್ರೇಷ್ಠ ಪರಂಪರೆ, ಕಲೆ, ಸಾಹಿತ್ಯ ಸಂಸ್ಕೃತಿಯ ಬೀಡು. ರಾಜ್ಯ ಅಭಿವೃದ್ಧಿಯತ್ತ ಸಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ  ಪ್ರಗತಿಗೆ ಸಾಕಷ್ಟು ಯೋಜನೆ ರೂಪಿಸಿದ್ದು, ಈ ಯೋಜನೆಗಳ ಫಲ ನಿರೀಕ್ಷಿತ ಮಟ್ಟದಲ್ಲಿ ಜನ ಸಮುದಾಯಕ್ಕೆ ತಲುಪಿಸುವ ಮಹತ್ತರ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಎನ್. ರಾಜಣ್ಣ ಮಾತನಾಡಿ, ಯುವ ಜನಾಂಗ ಈ ದೇಶದ ದೊಡ್ಡ ಆಸ್ತಿ,
ಸ್ವಾತಂತ್ರ್ಯ ರಕ್ಷಿಸಬೇಕು. ಆಗ ಮಾತ್ರ ದೇಶ ಸಮೃದ್ಧ, ಸುಭದ್ರ ರಾಷ್ಟ್ರವಾಗಲು ಸಾಧ್ಯ ಎಂದ ರಾಜಣ್ಣ, ಸ್ವಾಭಿಮಾನದಿಂದ  ಬದುಕುವ ಸಂಕಲ್ಪ ಮಾಡಬೇಕು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಹಕಾರ ಅತಿ ಮುಖ್ಯ ಎಂದರು.
ಸಂಸದ ಜಿ.ಎಸ್.ಬಸವರಾಜು ಈ ಬಯಲು ಸೀಮೆ ಪ್ರದೇಶಕ್ಕೆ ಶಾಶ್ವತ ನೀರಾವರಿ ಕಲ್ಪಿಸಿ ಕೊಡುವುದೇ ನನ್ನ ಧ್ಯೇಯ ಎಂದರು. ಡಿಡಿಪಿಐ ಆಂಜನಪ್ಪ ಮಾತನಾಡಿದರು.
ಸಮಾರಂಭದಲ್ಲಿ ತಾ.ಪಂ.ಅಧ್ಯಕ್ಷೆ ಸುನಂದ ಸಿದ್ದಪ್ಪ, ಸಿದ್ದಗಂಗಾಂಭಿಕೆ,ಪುರಸಭೆ ಅಧ್ಯಕ್ಷ ಎನ್.ಗಂಗಣ್ಣ, ಜುಬೇದಬಾನು, ಎಂ.ಎಸ್. ಚಂದ್ರಶೇಖರ್, ಶ್ರೀದೇವಿ, ಅಯೂಬ್, ಮಂಜುನಾಥ್, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಮುಖಂಡ ಎಂ.ಜಿ.ಶ್ರೀನಿವಾಸಮೂರ್ತಿ, ಪಿಸಿಕೆ ರೆಡ್ಡಿ, ಬಿಇಓ ರಾಮಕೃಷ್ಣಯ್ಯ, ಕಸಾಪ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ, ಎಆರ್ಟಿಒ ಬಾಲಕೃಷ್ಣ, ಇಓ ಮಹಾಲಿಂಗಪ್ಪ, ಡಿವೈಎಸ್ಪಿ ಗುರುಸ್ವಾಮಿ,ತಿಮ್ಮಯ್ಯ, ನೌಕರರ ಸಂಘದ ಅಧ್ಯಕ್ಷ ಎನ್. ಮಹಾಲಿಂಗೇಶ್, ಇಇ ಜಯಪ್ರಕಾಶ್, ಜಿ.ಪಂ. ಸದಸ್ಯೆ ಸುಮನ ಇನ್ನು ಅನೇಕ ಗಣ್ಯರು ಉಪಸ್ಥಿತರಿದ್ದರು. ಪೊಲೀಸ್ ಇಲಾಖೆ ಮತ್ತು ಗೃಹರಕ್ಷಕ ದಳ ಮತ್ತು ಶಾಲಾ ಮಕ್ಕಳಿಂದ ಕವಾಯಿತು ನಡೆದು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಾಕರ್ಷಣೆ ಪಡೆದವು. ಮೋಹನ ಪ್ರಾರ್ಥಿಸಿ ರಾಮಕೃಷ್ಣಯ್ಯ ಸ್ವಾಗತಿಸಿ ನಿರಂಜನ್ ನಿರೂಪಿಸಿ ವಂದಿಸಿದರು.       

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.