ರೇಷ್ಮೆ ಹುಳು ಸಾಕಣೆ ಮನೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ, ರೈತ ಗಂಭೀರ ಗಾಯ
ಕುಣಿಗಲ್: ರೇಷ್ಮೆ ಹುಳು ಸಾಕಣೆ ಮನೆಗೆ ಆಕಸ್ಮಿಕ ಬೆಂಕಿ ತಗಲಿ 4 ಲಕ್ಷ ರು. ಮೌಲ್ಯದ ನಷ್ಟ ಉಂಟಾಗಿ, ರೈತನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ, ಹುಲಿಯೂರುದುರ್ಗ ಹೋಬಳಿಯ ಹಿತ್ತಲಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಹಿತ್ತಲಪುರ ಗ್ರಾಮದ ನಿಂಗಯ್ಯ ಎಂಬಾತ, ರೇಷ್ಮೆ ಹುಳು ಸಾಕಣೆ ಮನೆ ನಿರ್ಮಿಸಿಕೊಂಡು, ರೇಷ್ಮೆ ಬೆಳೆಯಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು, ಎಂದಿನಂತೆ ಸೋಮವಾರ ರೇಷ್ಮೆ ಹುಳುಗಳ ಆರೈಕೆಗೆ ಗೂಡಿನ ಮನೆಯಲ್ಲಿದ್ದಾಗ , ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಸುಮಾರು 200 ಕೆಜೆ ರೇಷ್ಮೆ ಗೂಡು, ಚಂದ್ರಿಕೆ ಸೇರಿದಂತೆ ಇತರೆ ಪರಿಕರಗಳೆಲ್ಲಾ ಸುಟ್ಟು ಕರಕಲಾಗಿವೆ. ಅಗ್ನಿಶ್ಯಾಮಕ ದಳದ ಎರಡು ವಾಹನಗಳ ಸತತ ಕಾರ್ಯಾಚರಣೆಯಿಂದ ಬೆಂಕಿ ಹತೋಟಿಗೆ ಬಂದಿದೆ. ಘಟನೆಯಲ್ಲಿ ರೈತ ನಿಂಗಯ್ಯ ಗಂಭೀರವಾಗಿ ಗಾಯಗೊಂಡಿದ್ದು 4 ಲಕ್ಷ ರು.ನಷ್ಟವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

