ದೇಶದ ಏಕತೆಗೆ ಯುವಜನಾಂಗ ಪ್ರಾಮಾಣಿಕ ಪ್ರಯತ್ನ ಮಾಡಲಿ: ಶಾಸಕ ಶ್ರೀನಿವಾಸ್ ಕರೆ
ಗುಬ್ಬಿ: ದೇಶದ ಏಕತೆ ಮತ್ತು ಸಾಮಾಜಿಕ ವ್ಯವಸ್ಥೆಯನ್ನು ಉತ್ತಮಪಡಿಸುವುದರ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಇಂದಿನ ಯುವಜನಾಂಗ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಶಾಸಕ ಎಸ್.ಆರ್.ಶ್ರೀನಿವಾಸ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ಪಟ್ಟಣ ಪಂಚಾಯ್ತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ನಮ್ಮ ರಾಜಕೀಯ ವ್ಯವಸ್ಥೆ ದಿಕ್ಕು ತಪ್ಪುತ್ತಿದ್ದು ಜನಸಾಮಾನ್ಯರಿಗೆ ಸರ್ಕಾರದಿಂದ ತಲುಪಬೇಕಾದ ಸವಲತ್ತುಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದರು. ಶಾಸಕಾಂಗ ಮತ್ತು ಕಾರ್ಯಾಂಗಗಳು ಸಾಮರಸ್ಯದಿಂದ ಕೆಲಸ ಮಾಡುವಲ್ಲಿ ವಿಫಲವಾಗುತ್ತಿವೆ. ಈ ನಿಟ್ಟಿನಲ್ಲಿ ಯುವಕರು ಜಾಗೃತರಾಗಿ ನಮ್ಮ ಸಾಮಾಜಿಕ ವ್ಯವಸ್ಥೆಯನ್ನು ಸರಿಪಡಿಸುವತ್ತ ಮುಂದಾಗಬೇಕಾಗಿದೆ ಎಂದರು.
ಪ್ರಾಚಾರ್ಯ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ ನಮ್ಮ ಸಂವಿಧಾನ ಇಡೀ ವಿಶ್ವಕ್ಕೇ ಮಾದರಿಯಾಗಿದ್ದು ಸಂವಿಧಾನದ ಆಶೋತ್ತರಗಳನ್ನು ಪ್ರತಿಯೊಬ್ಬ ಭಾರತೀಯರು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕಾಗಿದೆ ಎಂದರು.
ತಾಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಎನ್. ಬಾಲಕೃಷ್ಣ, ಪಟ್ಟಣ ಪಂಚಾಯ್ತಿ ಅದ್ಯಕ್ಷ ಜಿ.ಡಿ. ಸುರೇಶ್ ಗೌಡ, ಉಪಾಧ್ಯಕ್ಷೆ ಪುಷ್ಪಾವತಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಟಿ.ಆರ್. ಗೌರಮ್ಮ, ಪಿ.ಬಿ. ಚಂದ್ರಶೇಖರಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು, ವೃತ್ತ ಆರಕ್ಷಕ ನಿರೀಕ್ಷಕ ಕುಮಾರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಗುಬ್ಬಿ, ಪಟ್ಟಣ ಪಂಚಾಯ್ತಿ ಸದಸ್ಯರಾದ ಮಹಮದ್ ಸಾಧಿಕ್, ಸಿ.ಮೋಹನ್, ಜಿ.ಸಿ. ನರಸಿಂಹಮೂರ್ತಿ, ವಿರೂಪಾಕ್ಷ, ಪ್ರೇಮಾ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಜಿ. ನಾಗಭೂಷಣ್, ರಾಜ್ಯ ಪರಿಷತ್ ಸದಸ್ಯ ಕೆ.ವಿ. ನಾರಾಯಣ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕತಿಕ ಕಾರ್ಯಕ್ರಮ ಹಾಗೂ ವಿವಿಧ ಇಲಾಖೆಗಳ ನೌಕರರಿಂದ ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆದವು. ಕ್ರೀಡಾ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

