ತುಮಕೂರು

ಬೆಲೆಯೇರಿಕೆ ವಿರೋಧಿಸಿ ಪ್ರತಿಭಟನೆ

Published On :

ತಿಪಟೂರು: ದಿನ ಬಳಕೆ ವಸ್ತುಗಳ ಬೆಲೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನ ಸಾಮಾನ್ಯರ ಬದುಕು ಅತಂತ್ರದ ಸ್ಥಿತಿಗೆ ತಲುಪುತ್ತಿದೆ. ಇದರ ಜೊತೆಗೆ ಪೆಟ್ರೋಲ್, ಡೀಸೆಲ್, ಅಡುಗೆ ಅನಿಗಳ ದರವೂ ಗಗನಮುಖಿಯಾಗುತ್ತಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಆದ್ದರಿಂದ ಇವುಗಳ ಬೆಲೆಯನ್ನು ಕಡಿಮೆ ಮಾಡಬೇಕೆಂದು ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ನೀಡಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷರ ಆರ್. ವಿಜಯ್ಕುಮಾರ್ ಅಡುಗೆ ಅನಿಲದ ಬೆಲೆ ಬಡ ಗ್ರಾಹಕರಿಗೆ ಹೊರೆಯಾಗುತ್ತಿದ್ದು, ಸಬ್ಸಿಡಿ ಹಣವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರ ಜಮಾವಣೆ ಮಾಡುವುದಾಗಿ ಹೇಳಿ ಕೆಲವರಿಗೆ ಮಾತ್ರ ಜಮಾ ಆಗಿದ್ದು, ಇನ್ನುಳಿದ ಗ್ರಾಹಕರು ದಿನವೂ ಅಲೆದಾಡುವಂತಾಗಿದೆ. ಅಧಿಕಾರಿಗಳ ಹಾರಿಕೆ ಉತ್ತರಗಳನ್ನು ಕೇಳಿ ಹೈರಾಣಾಗಿರುವ ಗ್ರಾಹಕರ ಗೋಳನ್ನು ತಪ್ಪಿಸುವ ಸರ್ಕಾರಗಳೇ ಕಣ್ಮುಚ್ಚಿ ಕುಳಿತುಕೊಂಡಿವೆ. ಈ ಕೂಡಲೆ ಸಂಬಂದಿಸಿದ ಗ್ಯಾಸ್ ಏಜೆಂಟರು ಹಾಗೂ ಬ್ಯಾಂಕ್ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿ ಜನಸಾಮಾನ್ಯರ ತೊಂದರೆಗಳ ನಿವಾರಣೆಗೆ ಕ್ರಮ ಜರುಗಿಸಬೇಕು. ಜೊತೆಗೆ ಪೆಟ್ರೋಲ್, ಡೀಸೆಲ್ಗಳ ಮೇಲೆ ಹೇರಿರುವ ಯಾವ ರಾಜ್ಯದಲ್ಲೂ ಇಲ್ಲದ ಪ್ರವೇಶ ತೆರೆಗೆ ತೆಗೆದುಹಾಕಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲಗಳ ಬೆಲೆಯಿಳಿಕೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
 ಪ್ರತಿಭಟನೆಯಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ಯಾದವ್, ಮುಖಂಡರಾದ ಕೆ.ಎನ್. ಜಯಸಿಂಹ, ವಿಜಯಕುಮಾರ್, ಮಲ್ಲಿಕಾರ್ಜುನಯ್ಯ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.