ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಕುಣಿಗಲ್: ಸರ್ಕಾರಿ ಪ್ರೌಢಶಾಲೆ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಇಟ್ಟಿರುವ ನಂಬಿಕೆ, ಭರವಸೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ಶೈಕ್ಷಣಿಕ ಪ್ರಗತಿಗೆ ಬದ್ಧತೆಯಿಂದ ಶ್ರಮಿಸುವಂತೆ ಶಾಸಕ ಡಿ.ನಾಗರಾಜಯ್ಯ ತಿಳಿಸಿದರು.
ಸೋಮವಾರ ತಾಲೂಕಿನ ಎಡೆಯೂರು ಹೋಬಳಿ ಚೊಟ್ಟನಹಳ್ಳಿ ಗ್ರಾಮದಲ್ಲಿ 30 ಲಕ್ಷ ರು.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಸೈಕಲ್ ವಿತರಿಸಿ ಮಾತನಾಡಿ, ಖಾಸಗಿ ಶಾಲೆಗಳು ಎಷ್ಟೇ ಆಮಿಷ ಒಡ್ಡಿದರೂ ಅದಕ್ಕೆ ಬಲಿಯಾಗದೆ ಪೋಷಕರು ತಮ್ಮ ಮಕ್ಕಳನ್ನು, ಸರ್ಕಾರಿ ಶಾಲಾ ಶಿಕ್ಷಕರ ಮೇಲೆ ನಂಬಿಕೆ, ಭರವಸೆ ಇಟ್ಟು ಕಳಿಸುತ್ತಿದ್ದಾರೆ. ಆದರೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೆಲ ಸರ್ಕಾರಿ ಶಾಲೆಗಳಲ್ಲಿ, ಸರ್ಕಾರವು ಎಲ್ಲಾ ಅಗತ್ಯ ಸೌಲಭ್ಯ ಕಲ್ಪಿಸಿದರೂ ತೃಪ್ತಿಕರವಾದ ಫಲಿತಾಂಶ ಬಾರದೆ, ಪೋಷಕರ ನಂಬಿಕೆ ಹುಸಿಯಾಗುವಂತಾಗಿರುವುದು ನಿಜಕ್ಕೂ ಖೇದಕರ. ನಾಗಸಂದ್ರ, ಚೊಟ್ನಹಳ್ಳಿ ಸುತ್ತಮುತ್ತಲ ಗ್ರಾಮಗಳ ಸಂಪರ್ಕರಸ್ತೆ ಅಭಿವೃದ್ಧಿಗೆ 95 ಲಕ್ಷ ರು.ವೆಚ್ಚದಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಪಂ ಅಧ್ಯಕ್ಷೆ ತೇಜಸ್ವಿನಿ, ಜಿಪಂ ಸದಸ್ಯ ಅರುಣಕುಮಾರ್, ಗ್ರಾಪಂ ಸದಸ್ಯ ಗಂಗಾಧರ, ತಾಪಂ ಮಾಜಿ ಸದಸ್ಯೆ ಗಂಗಾಧರಯ್ಯ, ಬಿಇಒ ಸಿದ್ದಯ್ಯ, ಬಿಪಿಇಒ ಗೋಪಾಲಕೃಷ್ಣ, ಜಿಪಂ ಎಇಇ ಸಣ್ಣಮರಿಗೌಡ, ಮುಖ್ಯೋಪಾಧ್ಯಾಯ ಅಜಿತ್ ಕುಮಾರ, ಕುಮಾರ್ ಇತರರು ಉಪಸ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

