ಜೆಡಿಎಸ್ ಕಾರ್ಯಕರ್ತರ ಬೈಕ್ ರ್ಯಾಲಿ
ಪಾವಗಡ: ರಾಜ್ಯ ಜೆಡಿಎಸ್ ವತಿಯಿಂದ ಬುಧವಾರ ಬೆಂಗಳೂರು ಆರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಯುವ ಚೇತನ ಸಮಾವೇಶಕ್ಕೆ ತಾಲೂಕಿನಿಂದ ಸಾವಿರಾರು ಮಂದಿ ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ತೆರಳಲಿದ್ದಾರೆ ಎಂದು ಶಾಸಕ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು. ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ನೇತೃತ್ವದಲ್ಲಿ ಜ.29ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಅವರಣದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಈಗಾಗಲೇ ತಾಲೂಕಿನ ಪಕ್ಷದ ಕಾರ್ಯಕರ್ತರಿಗೆ ಮಾಹಿತಿ ತಿಳಿಸಲಾಗಿದ್ದು ಆ ಭಾಗದ ಮುಖಂಡರ ನೇತೃತ್ವದಲ್ಲಿ ಹೊರಡಲಿದ್ದಾರೆ. ಸಮಾವೇಶ ಯಶಸ್ವಿಗೊಳಿಸುವ ಹಿನ್ನೆಲೆಯಲ್ಲಿ ಮಾಹಿತಿ ಗೊತ್ತಿಲ್ಲದೆ ಇರುವ ಕಾರ್ಯಕರ್ತರು ಮುಖಂಡರನ್ನು ಸಂಪರ್ಕಿಸಿ ಕೂಡಲೇ ತಮ್ಮ ಬೈಕುಗಳಲ್ಲಿ ತೆರಳುವಂತೆ ಕಾರ್ಯಕರ್ತರಲ್ಲಿ ಅವರು ಮನವಿ ಮಾಡಿದರು.ತಾ.ಜೆಡಿಎಸ್ ಅಧ್ಯಕ್ಷ ಎನ್.ತಿಮ್ಮಾರೆಡ್ಡಿ, ಜಿಪಂ ಸದಸ್ಯ ಆರ್.ಸಿ.ಅಂಜಿನಪ್ಪ, ಪಕ್ಷದ ತಾ.ಉಪಾಧ್ಯಕ್ಷ ಬಲರಾಮರೆಡ್ಡಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು, ಮುಖಂಡ ಪ್ರಸಾದ್‌ರೆಡ್ಡಿ, ಪಿ.ಎ.ಶ್ರೀನಿವಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

