ತುಮಕೂರು

'ನರೇಂದ್ರ ಮೋದಿ ಗೆಲ್ಲಿಸಲು ಬಿಎಸ್ವೈ ಅಭಿಮಾನಿಗಳು ಸಜ್ಜು: ಚಂದ್ರಶೇಖರಬಾಬು

Published On :

ಗುಬ್ಬಿ: ಭಾರತ ಸಮಗ್ರವಾಗಿ ಅಭಿವೃದ್ಧಿ ಹೊಂದಬೇಕಾದರೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯವಿದ್ದು ಅವರನ್ನು ಪ್ರಧಾನಿ ಮಾಡಲು ರಾಜ್ಯದ ನಿಷ್ಠಾವಂತ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧರಾಗಿರುವುದಾಗಿ ಜಿಪಂ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ತಿಳಿಸಿದರು.
ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ಚಿಂತನ- ಮಂಥನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಲವಾರು ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲದಲ್ಲಿವೆ. ಆದರೆ ಯಡಿಯೂರಪ್ಪ ಅಭಿಮಾನಿಗಳು ನಿಚ್ಚಳವಾಗಿ ನರೇಂದ್ರಮೋದಿ ಗೆಲವಿಗೆ ಶ್ರಮಿಸಲಿದ್ದಾರೆ. ಕೆಜೆಪಿಯ ನಿಷ್ಠಾವಂತರಾದ ಕಾರ್ಯಕರ್ತರು ಅದೇ ಪ್ರಾಮಾಣಿಕತೆಯನ್ನು ಮುಂದುವರೆಸುತ್ತೇವೆ ಎಂದರು.
ಗ್ರಾಮೀಣ ಮಟ್ಟದಲ್ಲಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಹೋರಾಟ ಮಾಡಿದ ಕೆಜೆಪಿ ಕಾರ್ಯಕರ್ತರು ವಿಧಾನಸಭಾ ಚುನಾವಣೆಯಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಅಲ್ಪ ಮತದ ಅಂತರದಲ್ಲಿ ಸೋಲು ಕಂಡರೂ, ಗುಬ್ಬಿ ಕ್ಷೇತ್ರದಲ್ಲಿ ಕೆಜೆಪಿ ತನ್ನ ದಿಟ್ಟತನ ಪ್ರದರ್ಶಿಸಿದೆ. ಇದೇ ಮಾದರಿಯಲ್ಲಿ ಲೋಕಸಭಾ ಚುನಾವಣೆ ಸಿದ್ಧತೆ ನಡೆಸಲು ಯಡಿಯೂರಪ್ಪ ಅಭಿಮಾನಿಗಳ ಬಳಗ ಸನ್ನದ್ಧವಾಗಿದೆ ಎಂದರು.
ಮುಖಂಡ ಕಟ್ಟಿಗೇನಹಳ್ಳಿ ರಂಗೇಗೌಡ ಮಾತನಾಡಿ, ತಾಲೂಕಿನಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾಣುತ್ತಿದೆ. ಶಾಶ್ವತ ನೀರಾವರಿ ಯೋಜನೆಗಳು ಜಾರಿಯಾಗಬೇಕಿದೆ. ಈ ನಿಟ್ಟಿನಲ್ಲಿ ಮೋದಿ ಅವರು ಪ್ರಧಾನಿ ಪಟ್ಟ ಏರಬೇಕಿದೆ ಎಂದರು.
ಸಮಾಜ ಸೇವಕಿ ಸಿ.ಟಿ.ಶಾರದಮ್ಮ ಮಾತನಾಡಿ, ಪ್ರಾಮಾಣಿಕ ಕಾರ್ಯಕರ್ತರಿಗೆ ಗೌರವ ಸಿಗಬೇಕು. ಪಕ್ಷದ ಏಳಿಗೆಗೆ ಅವರ ಪರಿಶ್ರಮ ಸಾಕಷ್ಟಿರುತ್ತಿದೆ. ಈ ನಿಟ್ಟಿನಲ್ಲಿ ರಾಜಕೀಯದ ಮುಂದಿನ ಹೆಜ್ಜೆ ತಿಳಿಯಲು ಕಾರ್ಯಕರ್ತರೊಡನೆ ಚರ್ಚೆ ಆಯೋಜಿಸಿರುವುದು ಸಂತಸದ ಸಂಗತಿ ಎಂದರು.
ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಚಿಕ್ಕಮ್ಮ, ಸದಸ್ಯರಾದ ದಯಾನಂದ್, ಗರಿಕಡ್ಡಿ ಶಿವಣ್ಣ, ಸೋಮೇಶ್, ಮುಳ್ಕಟ್ಟಯ್ಯ, ಜಯಮ್ಮ, ಎಪಿಎಂಸಿ ನಿರ್ದೇಶಕ ಹಿತೇಶ್, ಗ್ರಾಪಂ ಸದಸ್ಯರಾದ ಜಗದೀಶ್, ಗಿರೀಶ್, ಗೋವರ್ಧನ್, ಎಪಿಎಂಸಿ ಮಾಜಿ ಅಧ್ಯಕ್ಷ ಬಲರಾಮಯ್ಯ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನಟರಾಜು, ನಿಟ್ಟೂರು ವಿಎಸ್ಎಸ್ಎನ್ ಮಾಜಿ ಅಧ್ಯಕ್ಷ ಸಿದ್ದಲಿಂಗಪ್ಪ, ಜಾವೀದ್, ಸಿದ್ದರಾಮಯ್ಯ, ದೇವರಾಜು, ನಿಂಗರಾಜು, ಯತೀಶ್, ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.