ತುಮಕೂರು

ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

Published On :

ಮಧುಗಿರಿ: ಬೇರೊಬ್ಬಳ ಜತೆ  ತನ್ನ ಪತಿ  ಅನೈತಿಕ ಸಂಬಂಧ ಇಟ್ಟುಕೊಂಡಿದ್ದರಿಂದ  ಬೇಸತ್ತ ಮಹಿಳೆಯೊಬ್ಬಳು ಮನೆಯಲ್ಲಿನ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧುಗಿರಿಯಲ್ಲಿ ಬುಧವಾರ ಬೆಳಿಗ್ಗೆ  ನಡೆದಿದೆ. ಮುತ್ತಮ್ಮರಾಣಿ (40) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದ್ದು, ಈಕೆ ಪಟ್ಟಣದ ಹೊರ ವಲಯದ ನಿಸರ್ಗ ಗಾಮೆಂರ್ಟ್  ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಗಂಡ ಗಂಗನಾರಾಯಣ (42) ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಏನ್ನಲಾಗಿದ್ದು, ಈಚೆಗೆ ಗಾಮೆಂರ್ಟ್ಸ್ ಆವರಣದಲ್ಲೇ   ಮುತ್ತಮ್ಮರಾಣಿಗೆ ಅವಾಚ್ಯ ಶಬ್ದಗಳಿಂದ ಬೈದು ಅವಮಾನಿಸಿದ ಹಿನ್ನೆಲೆಯಲ್ಲಿ ಬೇಸತ್ತ ಮುತ್ತಮ್ಮರಾಣಿ ಗೌರಿಬಿದನೂರು ಗೇಟ್ ಬಳಿ ಇರುವ ತಮ್ಮ ಬಾಡಿಗೆ ಮನೆಯೊಂದರಲ್ಲಿ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ತಮ್ಮ ನಾಗಾರಜು ನೀಡಿರುವ ದೂರಿನ ಮೇರೆಗೆ ಮಧುಗಿರಿ ಪಿಎಸೈ ಅಂಬರೀಶ್ ಪ್ರಕರಣ ದಾಖಲಿಸಿ ಕೊಂಡು ಗಂಗನಾರಾಯಣನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕ್ಯಾಂಪಸ್ ನಾಗರೀಕ್ ಕಾರ್ಯಕ್ರಮಕ್ಕೆ ಚಾಲನೆ
ತುಮಕೂರು: ಭಾರತ ಜಗತ್ತಿನಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ. ಆದರೆ ಸ್ವಾತಂತ್ರ್ಯ ಪಡೆದು 70 ವರ್ಷ ಕಳೆದರೂ ಪ್ರಜಾಪ್ರಭುತ್ವದ ಪೂರ್ಣ ಫಲ ಈ ದೇಶದ ಜನರಿಗೆ ಸಿಗುತ್ತಿಲ್ಲ. ದಿನದಿಂದ ದಿನಕ್ಕೆ ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿದ್ದು ಇದಕ್ಕೆ ಕಾರಣ ಸಕ್ರಿಯ ನಾಗರಿಕತ್ವವಿಲ್ಲದಿರುವುದು ಎಂದು ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಜಯದೇವಪ್ಪ ಅಭಿಪ್ರಾಯಪಟ್ಟರು.
ಅವರು ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಿಎಂಸಿಎ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕ್ಯಾಂಪಸ್ ನಾಗರೀಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮ ಕುರಿತು ಮಾತನಾಡಿದ ತಿಪ್ಪೇಸ್ವಾಮಿ ಕೆ.ಟಿ. ಅವರು, ಕ್ಯಾಂಪಸ್ ನಾಗರೀಕ್ ಕಾರ್ಯಕ್ರಮವನ್ನು ಬೆಂಗಳೂರು, ಮೈಸೂರು ಮತ್ತು ತುಮಕೂರಿನ ಒಟ್ಟು 5 ಕಾಲೇಜುಗಳಲ್ಲಿ ಅನುಷ್ಟಾನ ಮಾಡಲು ಸಿಎಂಸಿಎ ಉದ್ದೇಶಿಸಿದೆ ಎಂದರು.
ಕಾರ್ಯಕ್ರಮವು ಸಕ್ರಿಯ ನಾಗರೀಕತ್ವ, ಪ್ರಜಾಪ್ರಭುತ್ವ, ಲಿಂಗ ಸಮಾನತೆ, ವೈವಿಧ್ಯತೆ, ಜೀವನ ಕೌಶಲ್ಯ ಮುಂತಾದ ಅಂಶಗಳನ್ನು ಒಳಗೊಂಡಿದ್ದು, ಕ್ಷೇತ್ರ ಭೇಟಿ ಕೂಡ ಒಳಗೊಂಡಿದೆ ಎಂದರು.
ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಎನ್.ನರಸಿಂಹರಾಜು ಮಾತನಾಡಿ, ಈ ಕಾರ್ಯಕ್ರಮ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.