ತುಮಕೂರು

ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವಲ್ಲಿ ಸರ್ಕಾರ ವಿಫಲ: ಶಾಸಕ ನಾಗರಾಜಯ್ಯ

Published On :

ಕುಣಿಗಲ್: ಮಾಜಿ ಸಿಎಂ ಕುಮಾರಸ್ವಾಮಿಯವರ ಆಡಳಿತಾವಧಿಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಪಕ್ಷಗಳು ಜನಪರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡುವಲ್ಲಿ ವಿಫಲವಾಗಿವೆ ಎಂದು ಶಾಸಕ ಡಿ. ನಾಗರಾಜಯ್ಯ ತಿಳಿಸಿದರು.
ಬುಧವಾರ, ತಾಲೂಕು ಯುವ ಜೆಡಿಎಸ್ ಹಮ್ಮಿಕೊಂಡಿದ್ದ  ಯುವಚೇತನ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಪುರಸಭೆ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿದ್ದರೂ ಬಹುತೇಕ ಎಲ್ಲಾ ರಂಗಗಳಲ್ಲೂ ವೈಫಲ್ಯ ಕಂಡಿದೆ. ಇನ್ನು ಬಿಜೆಪಿ ಈ ಹಿಂದೆ ನಡೆಸಿದ ಭ್ರಷ್ಟಾಚಾರದಿಂದ ಜನತೆ ಬೆಸತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ರಾಜ್ಯವು ಸಮಗ್ರ ಅಭಿವೃದ್ಧಿ ಹೊಂದಿದ್ದು, ಹಲವು ಜನಪರ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇಂದಿಗೂ ಜನಮನದಲ್ಲಿ ಉಳಿದಿದೆ. ಮುಂಬರುವ ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡುವುದರಲ್ಲಿ ಅನುಮಾನವಿಲ್ಲ ಎಂದರು.
 ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಲ್. ಹರೀಶ್, ಯುವಜೆಡಿಎಸ್ ಪದಾಧಿಕಾರಿಗಳಾದ ಜಗದೀಶ್, ನಾಗರಾಜ, ಪುರಸಭೆ ಸದಸ್ಯರಾದ ಚಂದ್ರಶೇಖರ, ಸತೀಶ, ಮಂಜು, ಸೇರಿದಂತೆ ಪ್ರಮುಖರಾದ ಗುರು, ರಾಮು, ನಾಗೇಶ, ಬೈರಪ್ಪ, ಸುರೇಶ, ಶೇಷ, ನಾಗರಾಜು, ಸೇರಿದಂತೆ ನೂರಾರು ಯುವ ಕಾರ್ಯಕರ್ತರು ಬೈಕ್ ಮೂಲಕ ಬೆಂಗಳೂರಿಗೆ ತೆರಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.