'ಗುಣಮಟ್ಟ ಕಳೆದುಕೊಂಡ ತಾಂತ್ರಿಕ ಶಿಕ್ಷಣ'
ತುಮಕೂರು: ಇಂದು ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶಿಸುತ್ತಿದ್ದಾರೆ. ಆದರೆ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಪ್ರಾಂಶುಪಾಲ ಡಾ. ವೇಣುಗೋಪಾಲ್ ಕೆ.ಆರ್ ವಿಷಾದಿಸಿದರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗವು ಟೆಕ್ವಿಪ್ ಸಹಯೋಗದೊಂದಿಗೆ ಡಿಜಿಟಲ್ ಇಮೇಜ್ ಪ್ರೊಸೆಸಿಂಗ್ ಮತ್ತು ಇಟ್ಸ್ ಅಪ್ಲಿಕೇಷನ್ ವಿಷಯ ಕುರಿತು ಏರ್ಪಡಿಸಿರುವ ಫೆ.1ರವರೆಗೆ ನಡೆಯಲಿರುವ ಐದು ದಿನಗಳ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಪ್ರಪಂಚದಲ್ಲಿ ಎಲ್ಲ ಪ್ರಕ್ರಿಯೆಗಳು ಅನಲಾಗ್ ರೂಪದಲ್ಲಿಯೇ ನಡೆಯುತ್ತವೆ. ನಮ್ಮ ಮೆದುಳು ಕೂಡ ನೋಡಿದ ದೃಶ್ಯಗಳನ್ನು ಅನಲಾಗ್ ರೂಪದಲ್ಲಿಯೇ ಗ್ರಹಿಸುತ್ತದೆ. ಆದರೆ ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚು ಬೆಳೆದಿದೆ. ಮಾಧ್ಯಮದವರು ಮಾಡುವ ರಹಸ್ಯ ಕಾರ್ಯಾಚರಣೆಯಲ್ಲಿ ಬಳಸುವ ಗುಪ್ತ ಕ್ಯಾಮರಾಗಳು, ಉಪಗ್ರಹಗಳು ತೆಗೆಯುವ ಚಿತ್ರಗಳು ಡಿಜಿಟಲ್ ರೂಪದವೇ ಆಗಿವೆ. ಇದರಿಂದ ಖಾಸಗಿ ಜೀವನಕ್ಕೆ ಧಕ್ಕೆಯಗುತ್ತದೆ. ಆದರೂ ಇದರ ಅನ್ವಯದಿಂದ ಅನೇಕ ಉಪಯೋಗಗಳಿವೆ ಎಂದರು.
ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಕೆ.ಎ.ಕೃಷ್ಣಮೂರ್ತಿ, ಸಂಸ್ಥೆಯ ಆಡಳಿತಾಧಿಕಾರಿ ಸಿ.ಎನ್.ನರಸಿಂಹಮೂರ್ತಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಎಂ.ಝಡ್.ಕುರಿಯನ್, ವೈ.ಎಂ ರೆಡ್ಡಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

