ತುಮಕೂರು

ಸುದ್ದಿ ಸಂಕ್ಷೇಪ

Published On :

ತಾಲೂಕು ಮಟ್ಟದ ಕೃಷಿ ಉತ್ಸವ
ಕುಣಿಗಲ್: ಫೆ.1 ಮತ್ತು 2ರಂದು ತಾಲೂಕಿನ ಹುಲಿಯೂರುದುರ್ಗದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕು ಮಟ್ಟದ ಕೃಷಿ ಉತ್ಸವ ಮತ್ತು ಮಾಹಿತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಯೋಜನಾಧಿಕಾರಿ ಶಶಿರೇಖಾ ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಪರಿಕರ ಪ್ರದರ್ಶನ, ತಜ್ಞರಿಂದ ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಚಿರತೆ ದಾಳಿ: ಮೂರು ಮೇಕೆ ಬಲಿ
ಕುಣಿಗಲ್: ತಾಲೂಕಿನ ರಂಗೇಗೌಡನಪಾಳ್ಯ ಗ್ರಾಮದಲ್ಲಿ ಚಿರತೆ ದಾಳಿಗೆ ಮೂರು ಮೇಕೆಗಳು ಬಲಿಯಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ನಿಂಗಪ್ಪ ಎಂಬಾತನ ಮನೆ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಮೂರು ಮೇಕೆಗಳ ಮೇಲೆ ನಸುಕಿನ ವೇಳೆಯಲ್ಲಿ ಚಿರತೆ ದಾಳಿ ನಡೆಸಿಕೊಂದಿದೆ. ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೃಷಿ ಉತ್ಸವ, ಆಂದೋಲನ
ಕುಣಿಗಲ್: ಇಂದು ಕೃಷಿ ಪ್ರದೇಶ ಕಡಿಮೆಯಾಗುತ್ತಿದೆ. ಬೆಳೆಯುವ ರೈತ ಹಲವು ಕಾರಣಗಳಿಂದ ಕೃಷಿ ಕಡೆದೆ ಒಲವು ಕಡಿಮೆ ಮಾಡಿಕೊಂಡು ಕೃಷಿಯೇತರ ಚಟುವಟಿಕೆಗಳ ಬಗ್ಗೆ ಆಸ್ತೆ ವಹಿಸುತ್ತಿರುವುದು ಮುಂದಿನ ದಿನಗಳಲ್ಲಿ ಗಂಭೀರ ಸಮಸ್ಯೆ ಉಂಟಾಗುವ ಎಲ್ಲಾ ಸಾಧ್ಯತೆಗಳು ಕಾಣುತ್ತಿವೆ. ಕಾರಣ ಕೃಷಿಯನ್ನು ಮತ್ತಷ್ಟು ಜನಪ್ರಿಯಗೊಳಿಸಿ, ಕೃಷಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಾಲೂಕಿನ ಹುಲಿಯೂರುದುರ್ಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೃಷಿ ಉತ್ಸವ ಮತ್ತು ಮಾಹಿತಿ ಆಂದೋಲನ ಕಾರ್ಯಕ್ರಮವನ್ನು ಫೆ. 1 ಮತ್ತು 2ನೇ ತಾರೀಕಿನಂದು ಹಮ್ಮಿಕೊಳ್ಳಲಾಗಿದ್ದು ರೈತರು ಕಾರ್ಯಕ್ರಮದ ಸದುಪಯೋಗಪಡೆದುಕೊಳ್ಳಬೇಕೆಂದು ತಾಲೂಕು ಯೋಜನಾಧಿಕಾರಿ ಶಶಿರೇಖಾ ಮನವಿ ಮಾಡಿದ್ದಾರೆ.
ಅಕ್ರಮ ಮರಳು ಸಾಗಾಣೆ: 18 ಲಾರಿಗಳ ವಶ
ಕುಣಿಗಲ್: ಕಂದಾಯ ಇಲಾಖೆ, ಪೊಲೀಸ್‌ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಹಸೀಲ್ದಾರ್ ಪುಟ್ಟನರಸಯ್ಯ ನೇತೃತ್ವದಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನ ಜಾವದವರೆಗೂ ತಾಲೂಕಿನ ವಿವಿಧೆಡೆ ಜಂಟಿಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಾಣೆಯಲ್ಲಿ ತೊಡಗಿದ್ದ 18 ಲಾರಿಗಳನ್ನು ವಶಪಡಿಸಿಕೊಂಡು, ಸರ್ಕಾರದ ನೂತನ ಮರಳು ನೀತಿ ಅನ್ವಯ ಕ್ರಮ ಕೈಗೊಂಡಿದ್ದಾರೆ.
ನೂತನ ದೇಗುಲ ಚಾಲನೆ
ಕುಣಿಗಲ್: ತಾಲೂಕಿನ ಅಮೃತೂರು ಸಮೀಪದ ಸೊಂಡೇಕೊಪ್ಪ ಗ್ರಾಮದಲ್ಲಿ ಗಾಳಿ ಆಂಜನೇಯಸ್ವಾಮಿ ನೂತನ ದೇವಾಲಯ ಉದ್ಘಾಟನೆ ಮತ್ತು ಗರುಡ ಕಂಬ ಪ್ರತಿಷ್ಠಾಪನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಗರುಡಕಂಭ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ  ಇಂಧನ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಡಿಸಿಎಂ ಆರ್. ಅಶೋಕ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದು, ಭಾನುವಾರ ನಡೆಯುವ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನಮಠದ ಕುಮಾರಚಂದ್ರಶೇಖರನಾಥ ಸ್ವಾಮೀಜಿ,ಅರೇಶಂಕರ ಮಠಾಧೀಶರಾದ ಸಿದ್ದರಾಮಚೈತನ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಪ್ರದಾನಮಂತ್ರಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ, ಶಾಸಕ ಡಿ.ನಾಗರಾಜಯ್ಯ ಸೇರಿದಂತೆ ಇತರೆ ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.