ಪೋಷಕರ ನಂಬಿಕೆ ಹುಸಿಗೊಳಿಸಬೇಡಿ
ತುಮಕೂರು: ಆಧುನೀಕರಣ ಮತ್ತು ಜಾಗತೀಕರಣದ ಪ್ರಭಾವಕ್ಕೆ ಒಳಗಾಗಿ ಕೆಟ್ಟ ದಾರಿ ತುಳಿದು ಪೋಷಕರು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿಗೊಳಿಸಿದಿರಿ ಎಂದು ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಡಾ. ವೀರೇಶಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.
ನಗರದ ಶ್ರೀಸಿದ್ಧಗಂಗಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂಸ್ಕೃತಿ, ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯೌವನದ ಹೊಸ್ತಿಲಿನಲ್ಲಿರುವ ನಿಮ್ಮ ಮೇಲೆ ಅಪಾರ ಜವಾಬ್ದಾರಿಯಿದೆ. ನಮ್ಮ ಮುಂದಿರುವ ಸವಾಲುಗಳು ಮತ್ತು ಹೋರಾಟಗಳ ಸರಿಯಾದ ನಿರ್ವಹಣೆ ಮಾಡದಿದ್ದರೆ ಯಶಸ್ಸು ಮರೀಚಿಕೆ ಎನಿಸಿಕೊಳ್ಳುತ್ತದೆ ಎಂದು ಕಿವಿ ಮಾತು ಹೇಳಿದರು. ವೀರಗಾಸೆ ಕಲಾವಿದ ಪ್ರೊ.ಎಚ್.ಎಸ್. ನೀಲಕಂಠಯ್ಯ ಮತ್ತು ಜಾನಪದ ಹಾಡುಗಾರ್ತಿ ಗಂಗುಚ್ಚಮ್ಮ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಶ್ರೀಸಿದ್ಧಗಂಗಾ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ.ಎಸ್. ರೇಣುಕಪ್ಪ ವಹಿಸಿದ್ದರು. 2014-15 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 109 ವಿದ್ಯಾರ್ಥಿನಿಯರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಪ್ರಕಾಶ್ ಅಭಿನಂದಿಸಿದರು. ವೇದಿಕೆಯಲ್ಲಿ ಶ್ರೀಸಿದ್ಧಗಂಗಾ ಮಹಿಳಾ ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ವಿ.ನಳಿನಾಕ್ಷಿ ಉಪಸ್ಥಿತರಿದ್ದರು. ಹರ್ಷಿತಾ ಸ್ವಾಗತಿಸಿದರು. 2014 ರ ಸಂಸ್ಕೃತಿ ಸಂಚಾಲಕಿ ಲತಾ ಕೆ.ಆರ್. ವಾರ್ಷಿಕ ವರದಿ ವಾಚಿಸಿದರು. ಕಾಲೇಜಿನ ಕಲಾಗಂಗಾ ತಂಡದಿಂದ ಗಾಯನ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

