ತರಬೇತಿಗೆ ಅರ್ಜಿ ಆಹ್ವಾನ
ತುಮಕೂರು: ಅಪರೇಲ್ ಟ್ರೈನಿಂಗ್ ಅಂಡ್ ಡಿಸೈನ್ ಸೆಂಟರ್ ತುಮಕೂರು ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಮೂರು ತಿಂಗಳ ಉಚಿತ ಹೊಲಿಗೆ ಮತ್ತು ಕಸೂತಿ ತರಬೇತಿಗಾಗಿ ಅರ್ಹ ತಾಂಡಾ ಯುವತಿ, ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 5ನೇ ತರಗತಿ ಪಾಸಾಗಿರಬೇಕು. 18ರಿಂದ 35 ವರ್ಷದ ವಯೋವಾನದವರಾಗಿರಬೇಕು. ತುಮಕೂರು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಹರು ಎಟಿಡಿಸಿ ತುಮಕೂರು, ಸಿದ್ದರಾಮಣ್ಣ ಹಾಸ್ಟಲ್ ಕಾಂಪೌಂಡ್, ಕೆಎಸ್ಆರ್ಟಿಸಿ ಬಸ್ನಿಲ್ದಾಣದ ಎದುರು ತುಮಕೂರು ಈ ವಿಳಾಸಕ್ಕೆ ಖುದ್ದಾಗಿ ಜು.9 ರೊಳಗೆ ಅರ್ಜಿ ಸಲ್ಲಿಸಬೇಕು.
ವೇತನ ಮಂಜೂರಿಗೆ ಆಹ್ವಾನ
2014-15 ನೇ ಸಾಲಿನಲ್ಲಿ ಸರ್ಕಾರದ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಶಾಲಾಗಳಲ್ಲಿ ವ್ಯಾಸಂಗ ಮಾಡುತ್ತಿರುವ 5ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, 2(ಎ), 2(ಬಿ), 3(ಎ), 3(ಬಿ) ವಿದ್ಯಾರ್ಥಿಗಳಿಂದ ನವೀಕರಣ ಹಾಗೂ ಹೊಸ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜುಲೈ 15 ರಿಂದ ಪಡೆದು ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಆಗಸ್ಟ್ 31 ರೊಳಗೆ ವಿಸ್ತರಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಂಬೇಡ್ಕರ್ ಭವನದ ಪಕ್ಕ, ದೇವರಾಜು ಅರಸು ಭವನ, ಎಂ.ಜಿ.ರಸ್ತೆ, ತುಮಕೂರು ಇಲ್ಲಿಗೆ ತಲುಪಿಸಬೇಕು.
ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ
ಹಿಂದುಳಿದ ವರ್ಗಗಳ ಇಲಾಖಾ ವತಿಯಿಂದ ಕೊರಟಗೆರೆ ಟೌನ್ನಲ್ಲಿ ನಡೆಯುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ವರ್ಗ 1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಕೊರಟಗೆರೆ ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಯನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

