ತುಮಕೂರು

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ

Published On :

ತಿಪಟೂರು: ಮೊಬೈಲ್, ದೂರದರ್ಶನದಂತಹ ವಸ್ತುಗಳ ದುರ್ಬಳಕೆಯಿಂದ ಇಂದು ಎಷ್ಟೋ ಹೆಣ್ಣು ಮಕ್ಕಳು ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ಈ ಬಗ್ಗೆ ಜಾಗೃತಿ ವಹಿಸಬೇಕೆಂದು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಲ್. ವಿಜಯಲಕ್ಷ್ಮಿ ತಿಳಿಸಿದರು.
 ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ನಡೆದ ಜಿಲ್ಲಾ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ಕಾನೂನು ಸಾಕ್ಷರತ ರಥ ಕಾರ್ಯಕ್ರಮ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಕಾರ್ಯಾಗಾರ ಉದ್ಘಾಟಿಸಿ, ಮಹಿಳೆಯರಿಗೆ ಕಾನೂನಿನ ಬಗ್ಗೆ ಅರಿವು ಅಗತ್ಯವಾಗಿದೆ. ಮುಂದೆ ಎದುರಾಗುವ ಸಮಸ್ಯೆಗಳನ್ನು ನಿರ್ಭಯದಿಂದ ಎದುರಿಸುವ ಸಹಾಯಕವಾಗುತ್ತದೆ. ಇಂತಹ ಶಿಬಿರಗಳಿಗೆ ಭಾಗವಹಿಸುವ ಮೂಲಕ ಜಾಗೃತರಾಗಬೇಕೆಂದರು.
ಅರಿವು: ಉಪವಿಭಾಗಾಧಿಕಾರಿ ಸಿಂಧು ಮಾತನಾಡಿ ಸಂಚಾರಿ ನ್ಯಾಯಾಲಯವು ಪ್ರತಿ ವರ್ಷಕ್ಕೆ 2ಬಾರಿ ನಡೆಸುತ್ತಿದ್ದು, ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಈ ಬಗ್ಗೆ ಅರಿವು ಮೂಡಿಸಬೇಕೆಂದರು. ವಕೀಲ ಚನ್ನೇಗೌಡ ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಮಾಹಿತಿ ತಿಳಿಸಿದರು. ಅಧ್ಯಕ್ಷತೆ ಪ್ರಾಂಶುಪಾಲ ಕೆ.ಎಸ್. ರಂಗನಾಥ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಆರ್. ಲೋಕಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ  ಕೆ.ಎಸ್. ಶಿಲ್ಪಾ, ತಹಸೀಲ್ದಾರ್ ಮಂಜುನಾಥ್, ಸರ್ಕಾರಿ ಅಭಿಯೋಜಕ ನಿರಂಜನಮೂರ್ತಿ, ವಕೀಲರ ಸಂಘದ ಅಧ್ಯಕ್ಷ ಎಸ್. ಜಯಣ್ಣ, ಸಿಡಿಪಿಒ ಪಿ. ಓಂಕಾರಪ್ಪ, ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷ ನಂದಕುಮಾರ್, ಇಓ ದಿಬ್ಬದಮನಿ, ಬಿಇಒ ಪ್ರಭುಸ್ವಾಮಿ, ವಕೀಲ ಬಸಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ಶಿವಮ್ಮ, ಜ್ಞಾನಮೂರ್ತಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.