ತುಮಕೂರು

ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ಕುಡುಕ ಆರೋಪಿ ಬಂಧನ

Published On :

ಪಾವಗಡ: ಚಾಕುವಿನಿಂದ ಇರಿದು ವಿದ್ಯಾರ್ಥಿನಿಯ ಕೊಲೆಗೆ ಯತ್ನಿಸಿದ ಘಟನೆ ವೈ.ಎನ್. ಹೊಸಕೋಟೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಡೆದಿದೆ.
14ವರ್ಷದ ಬಾಲಕಿ ರಕ್ಷಿತಾ ಇರಿತಕ್ಕೆ ಒಳಗಾದ ವಿದ್ಯಾರ್ಥಿನಿ. ತಾಲೂಕಿನ ಯಲ್ಲಪ್ಪ ನಾಯಕನಹಳ್ಳಿ ಗ್ರಾಮದ ಹನುಮಪ್ಪ ಎಂಬುವರ ಪುತ್ರಿ ರಕ್ಷಿತ ವೈ.ಎನ್. ಹೊಸಕೋಟೆ ಗ್ರಾಮದ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಶಾಲೆ ಮುಗಿಸಿಕೊಂಡು ಗ್ರಾಮಕ್ಕೆ ತರಳಲು ಬಸ್ ನಿಲ್ದಾಣಕ್ಕೆ ಬಂದಾಗ ಕುಡಿದ ಅಮಲಿನಲ್ಲಿ ಬಸ್ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ರಕ್ಷಿತಾಳ ಮೇಲೆ ಚಾಕುವಿನಿಂದ ಎರಗಿ ತೀವ್ರ ಗಾಯಗೊಳಿಸಿದ್ದಾನೆ. ಘಟನೆಯಿಂದ ಗಾಬರಿಯಾದ ಬಸ್ನಲ್ಲಿದ್ದ ಪ್ರಯಾಣಿಕರು ಕೆಳಗೆ ಓಡಿದ್ದಾರೆ.
ಪೊಲೀಸರು ಸ್ಥಳಕ್ಕೆ ದಾವಿಸಿ ಕುಡುಕನ ಹಿಡಿತದಲ್ಲಿದ್ದ ರಕ್ಷತಾಳನ್ನು ಪ್ರಾಣಪಾಯದಿಂದ ಪಾರು ಮಾಡಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಾಲಕಿಯನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಿತಿ ಚಿಂತಾಜನಕವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ನಿಮ್ಹಾನ್ಸ್ಗೆ ಕರೆದೊಯ್ಯಲಾಗಿದೆ.
ಕೊಲೆಗೆ ಯತ್ನಿಸಿದ ಆರೋಪಿ ಆಂಧ್ರ ಮೂಲದ ದಾಸರಮ್ಮನಹಳ್ಳಿ ಗ್ರಾಮದ ರಾಮಾಂಜಿನೇಯ ಎಂಬುವುದಾಗಿ ತಿಳಿದು ಬಂದಿದ್ದು, ಆರೋಪಿ ವಿರುದ್ಧ ಪಿಎಸ್ಐ ಮುರಳೀಧರ್ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಸಿ ವೈದ್ಯರಿಂದ ದ್ರಢೀಕರಣ ಪತ್ರ ಪಡೆದಿದ್ದಾರೆ. ಘಟನೆ ಬಗ್ಗೆ ಸಾರ್ವಜನಿಕ ವಲಯಗಳಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.