ತುಮಕೂರು

ಕಾಂಗ್ರೆಸ್ಗೆ ಚುನಾವಣೆಯಲ್ಲಿ ಮಾತ್ರ ದಲಿತರು ಬೇಕು: ತಿಪ್ಪೇಸ್ವಾಮಿ

Published On :

ಪಾವಗಡ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಾಲೂಕಿನಿಂದ ದಲಿತ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಲಭಿಸಿವೆ. ಹೀಗಿದ್ದಾಗ್ಯೂ ಕಾಂಗ್ರೆಸ್ ದಲಿತರನ್ನು ನಿರ್ಲಕ್ಷಿಸುತ್ತಿದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಸಿ.ಕೆ.ತಿಪ್ಪೇಸ್ವಾಮಿ ಹಾಗೂ ದಲಿತ ಪ್ರಗತಿ ಪರ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಹನುಮಂತರಾಯಪ್ಪ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಲೂಕಿನಲ್ಲಿ ಬಹುಸಂಖ್ಯಾತ ಮತಗಳಿರುವ ದಲಿತರನ್ನು ತಾಲೂಕು ಕಾಂಗ್ರೆಸ್ ಕಡೆಗಣಿಸಿದೆ. ಮೊನ್ನೆ ನಡೆದ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಗೆಲುವಿಗೆ ಶ್ರಮಿಸಲಾಯಿತು. ಚಂದ್ರಪ್ಪ ಅವರ ಗೆಲುವಿಗೆ ಮಾಜಿ ಸಚಿವ ವೆಂಕಟರವಣಪ್ಪ ಅವರ ಪರಿಶ್ರಮವಿದ್ದಂತೆ ಪಕ್ಷದ ನಿಷ್ಟಾವಂತ ದಲಿತ ಮುಖಂಡರಾದ ಕೋರ್ಟ್ ನರಸಪ್ಪ, ಮಾಜಿ ಶಾಸಕ ಉಗ್ರನರಸಿಂಹಪ್ಪ, ವೆರ್ಟನರಿ ಉಗ್ರಪ್ಪ ಹಾಗೂ ಇತರೆ ದಲಿತ ಸಂಘಟನೆಗಳ ಪರಿಶ್ರಮ ಕೂಡ ಇದೆ. ಜು. 3ರಂದು ಪಟ್ಟಣದಲ್ಲಿ ಮಾಜಿ ಸಚಿವ ವೆಂಕಟರವಣಪ್ಪ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಮತದಾರರಿಗೆ ಅಭಿನಂದನಾ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಸರಿಯಾದ ಮಾಹಿತಿ ನೀಡದೆ ವೇದಿಕೆಗೆ ದಲಿತ ಮುಖಂಡರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಆರೋಪಿಸಿದರು. ಎಸ್.ಹನುಮಂತರಾಯಪ್ಪ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.