ತುಮಕೂರು

ವಿದ್ಯಾವಂತರೆಲ್ಲ ಜ್ಞಾನಿಗಳಲ್ಲ: ವೈ.ಎಚ್. ಹುಚ್ಚಯ್ಯ

Published On :

ತುಮಕೂರು: ಪದವಿ ಪಡೆದ ವಿದ್ಯಾವಂತರೆಲ್ಲ ಜ್ಞಾನಿಗಳಲ್ಲ ಎಂದು ಜಿಪಂ ಪ್ರಭಾರ ಅಧ್ಯಕ್ಷ ವೈ.ಎಚ್. ಹುಚ್ಚಯ್ಯ ಅಭಿಪ್ರಾಯಪಟ್ಟರು.
ಜಯ ಕರ್ನಾಟಕ ಸಂಘಟನೆ ವಿದ್ಯಾರ್ಥಿ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ವಿದ್ಯೆಯಿಂದ ಘನತೆ, ಗೌರವ, ಆಚಾರ, ವಿಚಾರ ಬರುವುದಿಲ್ಲ. ಆಧುನಿಕ ಸಮಾಜದಲ್ಲಿ ಮನುಷತ್ವ ಮರೆಯಾಗುತ್ತಿದೆ. ಸಂಸ್ಕಾರವಿಲ್ಲದರ ಸಹವಾಸ ಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ತಾಪಂ ಪ್ರಭಾರ ಅಧ್ಯಕ್ಷ ಎಂ.ಬಿ. ಕುಮಾರ್, ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು. ಅಧ್ಯಕ್ಷೆತೆಯನ್ನು ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸುಮಾರು 250ಕ್ಕೂ ಹೆಚ್ಚು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜಯಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಎಚ್.ಎನ್. ದೀಪಕ್, ಯುವ ಘಟಕ ಅಧ್ಯಕ್ಷ ಕೆ.ಎಲ್. ಜಗದೀಶ್, ರಾಜ್ಯ ಹಿರಿಯ ಉಪಾಧ್ಯಕ್ಷ ರಾಮಚಂದ್ರಪ್ಪ, ಜಿಲ್ಲಾಧ್ಯಕ್ಷ ರಂಜನ್, ಜಿಲ್ಲಾ ಕಾರ್ಯಾಧ್ಯಕ್ಷ ಸೋಮಶೇಖರ್, ಜಿಲ್ಲಾ ವಿದ್ಯಾರ್ಥಿ ಘಟಕ ಅಧ್ಯಕ್ಷ ಚಂದನ್, ಜಿಲ್ಲಾ ಉಪಾಧ್ಯಕ್ಷ ದಿಲೀಪ್  ಸೇರಿದಂತೆ ರಾಜ್ಯ ಸಮಿತಿ, ಜಿಲ್ಲಾ ಸಮತಿ ಹಾಗೂ ತಾಲೂಕು, ಹೋಬಳಿ, ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.