ತುಮಕೂರು

10 ಸಾವಿರ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Published On :

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ನೂರರಷ್ಟು ಫಲಿತಾಂಶ ಪಡೆದು ಹೆಚ್ಚಿನ ಗೌರವ ತರಬೇಕು ಎಂದು ಪೈ ಅಂತಾರಾಷ್ಟ್ರೀಯ ಕಂಪನಿ ನಿರ್ದೇಶಕ ರಾಜಕುಮಾರ್ ಪೈ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸಿದ್ದಗಂಗಾ ಮಠದಲ್ಲಿ  ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 10 ಲಕ್ಷ ಬೆಲೆ ಬಾಳುವ 67 ಸಾವಿರ ನೋಟ್ ಪುಸ್ತಕಗಳನ್ನು 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಿ ಮಾತನಾಡಿದರು. ನಮ್ಮ ಪೈ ಕಂಪನಿ ವತಿಯಿಂದ ಶ್ರೀಗಳ ಮಠದ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲೂ ನಿರಂತರವಾಗಿ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಡಾ. ಶಿವಕುಮಾರ ಸ್ವಾಮೀಜಿ, ಗಂಗಾಧರ್ ಪೈ, ಪೈ ಕಂಪನಿಯ ಹಣಕಾಸು ಆಡಳಿತಾಧಿಕಾರಿ ಮೀನ ರಾಜ್ಕುಮಾರ್ ಪೈ, ಅಜಿತ್ ಕುಮಾರ್ ಪೈ, ಗುರುಪ್ರಸಾದ್ ಪೈ, ಉತ್ತಮ್ಕುಮಾರ್ ಪೈ, ದಾಮೋದರ್ ಪೈ, ಪೈ ಕಂಪನಿಯ ಸಿಬ್ಬಂದಿ ವರ್ಗದವರು, ಶ್ರೀ ಸಿದ್ದಗಂಗಾ ಮಠದ ಶಿಕ್ಷಕರು, ಆಡಳಿತಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.