ತುಮಕೂರು

ಮಾನಸಿಕ, ದೈಹಿಕ ಬೆಳವಣಿಗೆಗೆ ದೈಹಿಕ ಶಿಕ್ಷಣ ಅಗತ್ಯ

Published On :

ಮಧುಗಿರಿ: ವಿದ್ಯಾರ್ಥಿಗಳ ಮಾನಸಿಕ ಹಾಗೂ  ಶಾರೀರಿಕ ಬೆಳವಣಿಗೆಗೆ ದೈಹಿಕ ಶಿಕ್ಷಣ ಸಹಕಾರಿ ಎಂದು ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಸಣ್ಣಯ್ಯ ಹೇಳಿದರು. ತಾಲೂಕಿನ ಕಸಬಾ ಡಿ.ವಿ.ಹಳ್ಳಿ  ಸರ್ಕಾರಿ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ದೈಹಿಕ ಶಿಕ್ಷಕರ ಪ್ರಥಮ ತ್ರೈಮಾಸಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪಂದ್ಯಗಳ  ನಿಯಮಗಳು ಬದಲಾಗುತ್ತಿದ್ದು,ಅವುಗಳನ್ನು ತಿಳಿದು ಕೊಂಡು ಉತ್ತಮ ತೀರ್ಪು ನೀಡಬೇಕು.ಮಕ್ಕಳ ವಿದ್ಯೆ ಜತೆಗೆ  ಶಾಲಾ ಅವಧಿಯಲ್ಲಿ   ಕ್ರೀಡೆಯಲ್ಲಿ ಆಸಕ್ತಿ ಹೆಚ್ಚುವಂತೆ ಮಾಡುವ ಮೂಲಕ ವಿದ್ಯಾರ್ಥಿಗಳ  ಸರ್ವತೋಮುಖ ಬೆಳವಣಿಗೆಗೆ ದೈಹಿಕ ಶಿಕ್ಷಕರು ಶ್ರಮಿಸಬೇಕು ಎಂದರು. ಮುಖ್ಯ ಶಿಕ್ಷಕ  ಕೆ.ಎನ್.ಹನುಮಂತರಾಯಪ್ಪ ಗ್ರಾಮೀಣ ಮಕ್ಕಳಲ್ಲಿ ಕ್ರೀಡಾ ಮನೋಭಾವ ಹೆಚ್ಚಿದ್ದು, ಉತ್ತಮ ತರಬೇತಿ ನೀಡುವ ನಿಟ್ಟಿನಲ್ಲಿ ತಯಾರು ಮಾಡುವ ಜವಾಬ್ದಾರಿ  ದೈಹಿಕ ಶಿಕ್ಷಕರ ಮೇಲಿದೆ ಎಂದರು. ಕಾರ್ಯಾಗಾರದಲ್ಲಿ ತಾ.ದೈಹಿಕ ಶಿಕ್ಷಕ ಗಂಗಾಧರ್,ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ,ದೊಡ್ಡರಾಮಯ್ಯ,ಸಂಪನ್ಮೂಲ ಶಿಕ್ಷಕ ಸತೀಶ್,ಎಸ್ಡಿಎಂಸಿ ಅಧ್ಯಕ್ಷ ಹನುಮಂತರಾಜು ಹಾಗೂ ತಾ.ದೈಹಿಕ ಶಿಕ್ಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.