ಭಾವಸಾರ ಕ್ಷತ್ರಿಯ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ತುಮಕೂರು: ತುಮಕೂರಿನ ಭಾವಸಾರ ಕ್ಷತ್ರಿಯ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಪಾಂಡುರಂಗ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.
14ನೇ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ಬಡ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಸಮಾರಂಭ ಉದ್ಘಾಟಿಸಿದ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಬಿ.ಪಿ. ರಾಣೋಜಿರಾವ್ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ತಮ್ಮ ಸಂಘದ ವತಿಯಿಂದ ಜಿಲ್ಲೆಯ ಸಮಾಜದ ಏಳನೇ ತರಗತಿ, ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಡ ಮಕ್ಕಳಿಗೆ ಉಚಿತವಾಗಿ ಶಾಲಾಬ್ಯಾಗ್, ನೋಟ್ಪುಸ್ತಕಗಳನ್ನು ವಿತರಣೆ ಮಾಡಲಾಗುತ್ತಿದೆ. ಸಂಘದ ಈ ಸೌಲಭ್ಯವನ್ನು ಸಮಾಜದ ಜನತೆ ಸದುಪಯೋಗ ಪಡಿಸಿಕೊಂಡು ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಂತೆ ಸಲಹೆ ನೀಡಿದರು.
ಜನಗಣತಿ: ತುಮಕೂರಿನಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಬಾಂಧವರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬ ಬಗ್ಗೆ ಸಂಘದ ಬಳಿ ಯಾವುದೇ ಮಾಹಿತಿ ಇಲ್ಲದಿರುವ ಕಾರಣ ಈ ಬಾರಿಯಿಂದಲೇ ಭಾವಸಾರ ಕ್ಷತ್ರಿಯ ಸಮಾಜದ ಬಾಂಧವರ ಜನಗಣತಿ ಮಾಡಲು ಸಂಘವು ನಿರ್ಧರಿಸಿದೆ. ಕೆ. ಪ್ರಕಾಶ್ ಪುಠಾಣೆ, ಬೆಂಗಳೂರಿನ ಆರಕ್ಷಕ ನಿರೀಕ್ಷಕರಾದ ಎಸ್. ಗಣೇಶ್ ಮೂರ್ತಿ ಅಂಬೇಕರ್ ಇದ್ದರು.
ವಿತರಣೆ: ಸಮಾಜದ ಸುಮಾರು 54 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೆ ಸುಮಾರು 100 ಕ್ಕೂ ಹೆಚ್ಚು ಬಡಮಕ್ಕಳಿಗೆ ಉಚಿತವಾಗಿ ಶಾಲಾಬ್ಯಾಗ್ ಹಾಗೂ ನೋಟ್ಪುಸ್ತಕಗಳನ್ನು ವಿತರಿಸಲಾಯಿತು. ಇದೇ ವೇಳೆ ಹಿರಿಯ ಜಿಲ್ಲಾ ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಸಮಾಜ ಸೇವಕರಾದ ಡಾ. ನಿರ್ವಾಣಿ ರಾವ್ ಮಹಳತ್ಕರ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ರಾದ ವಿ.ಪಿ. ನಟೇಶ್ವರ್ಣಿ, ಅಧ್ಯಕ್ಷ ಟಿ.ವಿ.ಶ್ರೀನಿವಾಸ್ ಟೇಂಕರ್, ಎನ್. ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

