ತುಮಕೂರು

ಮನೆ ಬಾಗಿಲಿಗೆ ಕಾನೂನು ನೆರವು: ನ್ಯಾ. ವೀಣಾ

Published On :

ಚಿಕ್ಕನಾಯಕನಹಳ್ಳಿ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ನೆರವು ಸಿಗಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಕಾನೂನು ಅರಿವು- ನೆರವು ಕಾರ್ಯಕ್ರಮದ ಬಗ್ಗೆ ಜನರು ಹೊಂದಿರುವ ತಾತ್ಸಾರಕ್ಕೆ ಸಿವಿಲ್ ನ್ಯಾಯಧೀಶರಾದ ಎನ್. ವೀಣಾರವರು ವಿಷಾದಿಸಿದರು.
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದ ಕಾನೂನು ಸಾಕ್ಷರತಾರಥಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿ, ಜನಸಮಾನ್ಯರಿಗೆ ಕಾನೂನು ಅರಿವು ಮೂಡಿಸುವುದರಿಂದ ಹಣ ಮತ್ತು ಸಮಯದ ಉಳಿತಾಯಗುವದರ ಜೊತೆಗೆ ದುರ್ಬಲರಿಗೆ ನ್ಯಾಯ ದೊರೆತ ಸಮಾಧಾನ ಸಿಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಸಿ.ಎನ್. ಕೃಷ್ಣಮೂರ್ತಿ, ಕಾನೂನು ನೆರವು ನೀಡುವ ್ಛ್ಚದಲು ನಾವು ಅವರಲ್ಲಿ ನೆರವನ್ನು ಪಡೆಯುವ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಜನರಿಗೆ ಅರಿವಿಲ್ಲದ ಕಾರಣ ಮಧ್ಯವರ್ತಿಗಳ ಹಾವಳಿಯಿಂದ ನೆರವನ್ನು ಪಡೆಯಲು ವಿಫಲರಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅಪರ ಸಿವಿಲ್ ನ್ಯಾಯಾಧೀಶರಾದ ಸೋಮನಾಥ್ ಮಾತನಾಡಿದರು. ಎನ್. ಶ್ರೀಧರ್ ಹೆಣ್ಣುಮಕ್ಕಳ ಆಸ್ತಿ ಹಕ್ಕಿನ ಬಗ್ಗೆ ಉಪನ್ಯಾಸ ನೀಡಿದರು. ವಕೀಲರ ಸಂಘದ ಕಾರ್ಯದರ್ಶಿ ಹನುಮಂತಯ್ಯ, ಸರ್ಕಾರಿ ಸಹಾಯಕ ಅಭಿಯೋಜಕ ಆರ್. ರವಿಚಂದ್ರ, ಸಿ.ಬಿ. ಸಂತೋಷ್, ಎಸಿಡಿಪಿಒ ಪರಮೇಶ್ವರಪ್ಪ, ಬಿಆರ್ಸಿ ತಿಮ್ಮರಾಯಪ್ಪಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.