ತುಮಕೂರು

ರಾಷ್ಟ್ರೀಯ ಏಕತೆಗಾಗಿ ಸೇವಾ ದಳ

Published On :

ಚಿಕ್ಕನಾಯಕನಹಳ್ಳಿ: ಮಹಾತ್ಮ ಗಾಂಧಿಯವರ ಜೀವನ ಮೌಲ್ಯದ ಮೇಲೆ ಯುವಕರನ್ನು ಸಂಘಟಿಸಿ ರಾಷ್ಟ್ರೀಯ ಸೇವೆಗಾಗಿ ತರಬೇತಿ ನೀಡುವ ಮಹತ್ವಾಕಾಂಕ್ಷಿ ಸಂಘಟನೆ ಭಾರತ ಸೇವಾದಳ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ. ನಾಗೇಶ್ ಹೇಳಿದರು.
ಪಟ್ಟಣದ ಡಿವಿಪಿ ಬಾಲಿಕಾ ಪ್ರೌಢಶಾಲೆಯಲ್ಲಿ  ಆಯೋಜಿಸಿದ್ದ ಭಾರತ ಸೇವಾದಳ ಕಾರ್ಯಕ್ರಮದಲ್ಲಿ ಮಾತನಾಡಿ, ಸೇವಾದಳದ ಮುಖ್ಯ ಉದ್ದೇಶ ಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡುವುದು. ರಾಷ್ಟ್ರ ಸೇವೆ ಮಾಡುವ ಸಂದರ್ಭದಲ್ಲಿ ಅವರಲ್ಲಿ ಸಂಯಮ, ಧೈರ್ಯ, ತ್ಯಾಗ ಮನೋಭಾವ ಹೊಂದುವಂತೆ ಮಾಡುವುದು ಈ ಸಂಘಟನೆ ಧ್ಯೇಯವಾಗಿದೆ ಎಂದರು.
ನೂತನವಾಗಿ ಆಯ್ಕೆಯಾದ ತಾಲೂಕು ಶಾಖೆ ಅಧ್ಯಕ್ಷ ಎ.ಎಸ್. ಈಶ್ವರಯ್ಯ ಮಾತನಾಡಿದರು. ಸೀಮೆಎಣ್ಣೆ ಕೃಷ್ಣಯ್ಯ, ನರಸಿಂಹಮೂರ್ತಿ, ಪ್ರಸನ್ನಕುಮಾರ್,ಸದಾಶಿವಯ್ಯ ಇದ್ದರು.
ಅರ್ಜಿ ಆಹ್ವಾನ
ಕೊರಟಗೆರೆ: ತಾಲೂಕಿನಲ್ಲಿ ಖಾಲಿಯಿರುವ ಗಟ್ಲಹಳ್ಳಿ, ನೀಲಗೊಂಡನಹಳ್ಳಿ, ಮುದ್ದನಹಳ್ಳಿ (ಮಿನಿ) ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ ತುಂಬಾಡಿ-1, ಕೋಳಾಲ-1, ರಾಯವಾರ-1 ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜು.30. ಮಾಹಿತಿಗಾಗಿ ಕೊರಟಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು  ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಶ್ವನಾಥ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.