ಗೋಲಿಬಾರ್ ವಿರೋಧಿಸಿ ರಸ್ತೆತಡೆ
ತುಮಕೂರು: ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ಕಾರ್ಯಕರ್ತರು ರಸ್ತೆತಡೆ ನಡೆಸಿದರು.
ನಗರದ ಟೌನ್ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ರೈತರು, ಮಾನವ ಸರಪಳಿ ನಿರ್ಮಿಸಿ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು. ಜನಜೀವನಕ್ಕೆ ಕಂಟಕವಾಗಿರುವ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ಗೋಲಿಬಾರ್ ನಡೆಸಿ ಮೂವರು ರೈತರು ಗಾಯಗೊಳ್ಳುವಂತೆ ಮಾಡಿದ್ದಾರೆ. ಸರ್ಕಾರವೇ ರೈತರ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು. ಗೋಲಿಬಾರ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಗಾಯಗೊಂಡಿರುವ ರೈತರಿಗೆ ಸೂಕ್ತ ಪರಿಹಾರ ವಿತರಿಸಬೇಕು. ಅಲ್ಲದೇ ಬಂಧಿಸಿರುವ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾನಿರತ ರೈತರನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರನ್ನು ಕಡೆಗಣಿಸಿದೆ. ಕಬ್ಬಿಗೆ ಸೂಕ್ತ ಬೆಲೆ ನೀಡದೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ. ಅಲ್ಲದೇ ಕಲ್ಲಿದ್ದಲು ತ್ಯಾಜ್ಯ ಹಾರುವ ಬೂದಿಯಿಂದ ಜನಜೀವನದ ಮೇಲಾಗುವ ದುಷ್ಪರಿಣಾಮದ ಅರಿವಿರುವ ಜನತೆ ಪ್ರತಿಭಟನೆ ನಡೆಸಿದರೆ ಪೊಲೀಸರ ಮೂಲಕ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಕೂಡಲೇ ದೌರ್ಜನ್ಯದ ಮೂಲಕ ಪ್ರತಿಭಟನೆ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಕೈ ಬಿಡಬೇಕು. ಕೂಡಗಿ ಗೋಲಿಬಾರ್ನಿಂದ ಗಾಯಗೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದರು.
ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣ ಕಾರ್ಯದಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ನಿಜಾನಂದ ಮೂರ್ತಿ, ಶಂಕರಪ್ಪ, ಮೂಡ್ಲಗಿರಿಯಪ್ಪ, ಬೋರೇಗೌಡ, ವೆಂಕಟೇಶ್, ಶ್ರೀನಿವಾಸ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

