ತುಮಕೂರು

ಸಿರಿ ಉತ್ಪನ್ನ ಮಾರಾಟ ಮೇಳ

Published On :

ಪಾಂಡವಪುರ: ಪಟ್ಟಣದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂದಿರದಲ್ಲಿ ಸಿರಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ಎನ್. ಮೇದಪ್ಪ ಮಾತನಾಡಿ, ತಾಲೂಕಿನಲ್ಲಿ ಕಳೆದ ಒಂದು ವರ್ಷದಿಂದ ಸಂಸ್ಥೆ ಜನರಿಗೆ ಉಪಯೋಗವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.ಗ್ರಾಮೀಣ ಮಟ್ಟದಲ್ಲಿ ಗಾಂಧೀಜಿ ಕಂಡ ಕನಸು ಗ್ರಾಮ ಸ್ವರಾಜ್ಯ ಮಾದರಿಯಾಗಿಟ್ಟುಕೊಂಡು ಯೋಜನೆಯು ಗ್ರಾಮೀಣ ಸಂಪನ್ಮೂಲ ಕೇಂದ್ರಗಳಲ್ಲಿ ವಿವಿಧ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುತ್ತಿದೆ.   ಮಹಿಳೆಯರಿಗೆ ತರಬೇತಿ ನೀಡಿ ಕಚ್ಚಾ ಸಾಮಗ್ರಿ ಒದಗಣೆ, ಗುಣಮಟ್ಟ ವಸ್ತುಗಳ ಉತ್ಪಾದನೆ, ಪ್ಯಾಕಿಂಗ್ ಮತ್ತು ಮಾರಾಟ ಮಾಡುವ ಸಲುವಾಗಿ ಸಂಸ್ಥೆ ಗ್ರಾಮೋದ್ಯೋಗ ಸಂಸ್ಥೆಯನ್ನು ಸ್ಥಾಪಿಸಿದೆ ಎಂದರು.ಸಂಸ್ಥೆ ಮುಖೇನ ಮಹಿಳೆಯರಿಗೆ ಉದ್ಯೋಗ ದೊರೆತಿದೆ. ಈ ವಸ್ತುಗಳನ್ನು ಸಿರಿ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.