ನೀರಿಗೆ ಹಾಹಾಕಾರ: ಪ್ರತಿಭಟನೆ
ಹಲಗೂರು: ಇಲ್ಲಿಗೆ ಸಮೀಪದ ಗುಂಡಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ತುಂಬಾ ತೊಂದರೆಯಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲದ ಕಾರಣ ಸೋಮವಾರ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಹೆಚ್. ಬಸವಾಪುರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಪಂಗೆ ಸೋಮವಾರ ಗುಂಡಾಪುರ, ಬಸವಾಪುರ, ನಂದಿಪುರ, ಬಸವನಹಳ್ಳಿ ಗ್ರಾಮಗಳಿಗೆ ಸೇರಿದ ಸಾರ್ವಜನಿಕರು ಕುಡಿಯುವ ನೀರಿಗೆ ತುಂಬಾ ತೊಂದರೆಯಾಗುತ್ತಿದ್ದು ಇದುವರೆಗೂ ಯಾವ ಅಧಿಕಾರಿಯೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನಮ್ಮ ಗ್ರಾಮಕ್ಕೆ ನೀರುಕೊಡಿ ಇಲ್ಲ ಪಂಚಾಯ್ತಿ ಖಾಲಿ ಮಾಡಿ. ತೊರೆಕಾಡನಹಳ್ಳಿ ಗ್ರಾಮದಲ್ಲಿರುವ ಬೆಂಗಳೂರು ನೀರು ಸರಬರಾಜು ಜಲಮಂಡಳಿಯಿಂದ ಬೆಂಗಳೂರಿನ ಜನತೆಗೆ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದಕ್ಕೆ ನಮ್ಮ ಜಮೀನುಗಳಲ್ಲಿ ಪೈಪುಗಳನ್ನು ಹಾಕಿಕೊಂಡು ಹೋಗಲು ಜಮೀನುಗಳನ್ನು ಬಿಟ್ಟುಕೊಟ್ಟಿದ್ದೇವೆ. ಆದರೆ ನಮಗೆ ಕುಡಿಯುವ ನೀರಿಗೆ ತುಂಬಾ ತೊಂದರೆ ಇದ್ದರೂ ಯಾವ ಅಧಿಕಾರಿಯೂ ಪರಿಹಾರ ನೀಡದಿದ್ದರಿಂದ ಬೇಸತ್ತಿದ್ದೇವೆ ಎಂದು ಹೇಳಿ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಬಂದು ಎ.ಇ.ಇ ಪದ್ಮನಾಭ ಪ್ರತಿಭಟನಾಕಾರರ ಜೊತೆ ಮಾತನಾಡಿ ಕುಡಿಯುವ ನೀರಿಗೆ ತಕ್ಷಣಕ್ಕೆ ನಿಮ್ಮ ಗುಂಡಾಪುರ ಗ್ರಾಮಕ್ಕೆ ನಿತ್ಯ ಟ್ರ್ಯಾಕ್ಟರ್ನಲ್ಲಿ ನೀರು ಸರಬರಾಜು ಮಡುತ್ತೇವೆ ಹಾಗೂ ಕೆಟ್ಟಿರುವ ಬೋರ್ವೆಲ್ಗಳನ್ನು ಸರಿಪಡಿಸಿ ಹೊಸದಾಗಿ ಬೋರ್ವೆಲ್ ತೆಗೆಸಿಕೊಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು. ಗ್ರಾಮಸ್ಥರಾದ ನಾಗಸಿದ್ದಯ್ಯ ವೀರತಪ್ಪ, ಶಿವಮೂರ್ತಿ, ಮರಿಸ್ವಾಮಿ, ನಟರಾಜು, ಶಿವಪ್ರಸಾದ್, ಕೃಷ್ಣಪ್ಪ, ಗೀತ, ಮಂಚಮ್ಮ, ಬಸವೇಗೌಡ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

