ತುಮಕೂರು

ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಸಿದ್ಧಲಿಂಗೇಗೌಡ ಭೇಟಿ

Published On :

ತುರುವೇಕೆರೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಕ್ಕಳು ಹಾಗೂ ತಾಯಂದಿರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ತಯಾರಿಕಾ ಘಟಕದಲ್ಲಿ ಗುಣಮಟ್ಟ ಹಾಗೂ ಶುಚಿತ್ವ ಕಾಪಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಮಾನವ ಹಕ್ಕುಗಳ ಹೋರಾಟಗಾರ ಸಿದ್ಧಲಿಂಗೇಗೌಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಹಾವಾಳದಲ್ಲಿ ನಡೆಯುತ್ತಿರುವ ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಿದ್ಯಾರ್ಥಿಗಳು ಹಾಗೂ ಮಕ್ಕಳ ಆರೋಗ್ಯ ರಕ್ಷಣೆ ಕಾಪಾಡುವ ನಿಟ್ಟಿನಲ್ಲಿ ಅಂಗನವಾಡಿ, ಹಾಸ್ಟೆಲ್ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನೀಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಆತಂಕ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಖುದ್ದಾಗಿ ಆಸಕ್ತಿ ವಹಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ಪತ್ರ ಬರೆದು ಅಲ್ಲಿನ ವಾಸ್ತವಾಂಶಗಳ ಕುರಿತು ಅಧ್ಯಯನ ಮಾಡಿ ವರದಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದರ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕಕ್ಕುಗಳ ಆಯೋಗ ಜಿಲ್ಲೆಯ ಮಾನವ ಹಕ್ಕುಗಳ ಹೋರಾಟಗಾರ ಸಿದ್ಧಲಿಗೇಗೌಡರವರಿಗೆ ಪತ್ರ ಬರೆದು ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳು, ಹಾಸ್ಟೆಲ್ ಹಾಗೂ ಇತರೆ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಿತ್ತು.
ಪಟ್ಟಣದಲ್ಲಿರುವ ಶಿಶು ಅಭಿವೃಧ್ಧಿ ಇಲಾಖೆಯ ದಾಸ್ತಾನು ಕೊಠಡಿಗೆ ಭೇಟಿ ನೀಡಿದ ಸಿದ್ದಲಿಂಗೇಗೌಡ ಮಕ್ಕಳಿಗೆ ಸರಬರಾಜು ಮಾಡಲು ಸಿದ್ಧಪಡಿಸಿದ ಆಹಾರಗಳ ಗುಣಮಟ್ಟವನ್ನು ಪರಿಶೀಲಿಸಿದರು. ನಂತರ ಹಾವಾಳ ಗ್ರಾಮದಲ್ಲಿ ಸ್ವಯಂ ಸೇವಾ ಸಂಸ್ಥೆ ವತಿಯಿಂದ ನಡೆಸಲಾಗುತ್ತಿರುವ ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅವರು ಯಂತ್ರಗಳ ಸಹಾಯದಿಂದ ಮಕ್ಕಳಿಗೆ ನೀಡಲಾಗುವ ಪೌಷ್ಟಿಕಾಂಶ ಆಹಾರಗಳ ತಯಾರಿಕೆಯನ್ನು ವೀಕ್ಷಿಸಿದರು. ಸುಮಾರು 25 ಮಂದಿ ಮಹಿಳೆಯರ ತಂಡ ಮಕ್ಕಳಿಗೆ ಅಗತ್ಯವಾಗಿ ಬೇಕಿರುವ ಪೌಷ್ಟಿಕಾಂಶಗಳನ್ನು ಉತ್ಪಾದಿಸುವ ರೀತಿಯನ್ನು ಪರಿಶೀಲಿಸಿದರು. ಅಕ್ಕಿ, ಗೋದಿ, ಹೆಸರು ಬೇಳೆ, ಹೆಸರು ಕಾಳು, ಕಡಲೇ ಬೇಳೆ, ಬೆಲ್ಲ, ಎಣ್ಣೆ ಮುಂತಾದ ವಸ್ತುಗಳ ವರ್ಗೀಕರಣ ಮಾಡುವ ವಿಧಾನವನ್ನೂ ಪರಿಶೀಲಿಸಿದರು. ಆಹಾರ ಧಾನ್ಯಗಳ ಗುಣಮಟ್ಟವನ್ನು ಪರೀಕ್ಷಿಸಿದರು. ಕಚ್ಚಾವಸ್ತುಗಳ ದಾಸ್ತಾನು ಕ್ರಮವನ್ನು ಸರಿಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.
ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕದಲ್ಲಿ ಶುಚಿತ್ವ ಹಾಗೂ ಗುಣಮಟ್ಟವನ್ನು ಕಾಪಾಡಿಕೊಂಡಿರುವ ಕುರಿತು ಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖಾ ಉಪ ನಿರ್ದೇಶಕ ನಂಜೇಗೌಡ, ಜಿಲ್ಲಾ ನಿರೂಪಾಣಾಧಿಕಾರಿ ನಟರಾಜು, ಶಿಶು ಅಭಿವೃಧ್ಧಿ ಯೋಜನಾಧಿಕಾರಿ ಎನ್.ಜಿ.ರವೀಂದ್ರ, ತುಮಕೂರು ಜಿಲ್ಲಾ ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕದ ಸಮನ್ವಯಾಧಿಕಾರಿ ಹೃಶಿಕೇಶ್ ಸಿದ್ದಲಿಂಗೇಗೌಡರೊಂದಿಗೆ ಇದ್ದು ಮಾಹಿತಿ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.