ಗುಬ್ಬಿ: ಕನ್ನಡ ಸಾಹಿತ್ಯ ಪರಿಷತ್ನ ನಿಕಟ ಪೂರ್ವ ಜಿಲ್ಲಾಧ್ಯಕ್ಷ ನಿ.ರಾ.ಸದಾನಂದ(72) ಗುರುವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ದೈಹಿಕ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಸದಾನಂದ ಅವರು ನಿವೃತ್ತರಾದ ಬಳಿಕ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ತಾಲೂಕಿನ ನಿಟ್ಟೂರಿನಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಮತ್ತು ತುಮಕೂರಿನಲ್ಲಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನಗಳು ಇವರ ನೇತೃತ್ವದಲ್ಲಿ ನಡೆಸಲಾಗಿತ್ತು. 25 ವರ್ಷದಿಂದ ಕಸಾಪ ಅಭಿವೃದ್ಧಿಗೆ ಶ್ರಮಿಸಿದ ಸದಾನಂದ ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ಅವರ ಸ್ವಗ್ರಾಮ ಎನ್.ರಾಂಪುರದಲ್ಲಿ ನೆರವೇರಿಸಲಾಯಿತು. ತಾಲೂಕು ಕಸಾಪ ಅಧ್ಯಕ್ಷ ರಾಜೇಶ್ ಗುಬ್ಬಿ, ಗೌರವ ಕಾರ್ಯದರ್ಶಿ ಜಿ.ಗೋವಿಂದಯ್ಯ ಸಂತಾಪ ಸೂಚಿಸಿದ್ದಾರೆ.