ತುಮಕೂರು

ವಿವಿಧೆಡೆ ಕಾನೂನು ಅರಿವು ಇಂದಿನಿಂದ

Published On :

ಪಾವಗಡ: ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕಾಡಳಿತ, ತಾಪಂ, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲೂಕಿನ ವಿವಿಧ ಸ್ಥಳಗಳಲ್ಲಿ ಕಾನೂನು ಅರಿವು ಮತ್ತು ರಥ ಸಂಚಾರಿ ಜನತಾ ನ್ಯಾಯಾಲಯದ ಕಾರ್ಯಕ್ರಮಗಳನ್ನು ಜು.11ರಿಂದ 13ರವರೆಗೆ ಹಮ್ಮಿಕೊಳ್ಳಲಾಗಿದೆ. ಜು.11ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ನ್ಯಾಯಾಲಯದ ಅವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಕಸನಕಪ್ಪ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಪಂ ಇಒ ತಿಪ್ಪೇಸ್ವಾಮಿ ವಹಿಸಲಿದ್ದು, ಜೆಎಂಎಫ್ಸಿ ನ್ಯಾಯಾಲಯದ ಸಿವಿಲ್ ಜಡ್ಜ್ ವರದರಾಜ್, ತಹಸೀಲ್ದಾರ್ ತಿಮ್ಮಪ್ಪ ಬೋವಿ, ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ವಿ.ಮಂಜುನಾಥ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಕೀಲ ಎಂ.ಭಗವಂತಪ್ಪ ಉಪಸ್ಥಿತರಿರುವರು. ಹಿರಿಯ ವಕೀಲ ಪಿ.ಶಿವಕುಮಾರ್ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಕೋಟಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು, ಜು.12ರಂದು ಬೆಳಗ್ಗೆ 11 ಗಂಟೆಗೆ ಗುಮ್ಮಘಟ್ಟ ಸರ್ಕಾರಿ ಪ್ರೌಢಶಾಲೆ, ಮಧ್ಯಾಹ್ನ 3 ಗಂಟೆಗೆ ಜಾಜೂರಾಯನಹಳ್ಳಿ ಪ್ರಾಥಮಿಕ ಶಾಲಾ ಅವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.