ಕುಣಿಗಲ್: ಹೆರಿಗೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ಕಾರಣ ಆಸ್ಪತ್ರೆ ಸಿಬ್ಬಂದಿ ನವಜಾತ ಹೆಣ್ಣುಮಗುವನ್ನು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಪಟ್ಟಣದ ಖಾಸಗಿ ಆಸ್ಪತ್ರೆಗೆ ಕಳೆದ ಭಾನುವಾರ ಲಕ್ಷ್ಮೀ, ಸಂತೆಬೀದಿ, ಹುಲಿಯೂರುದುರ್ಗ ಎಂಬ ವಿಳಾಸ ನೀಡಿ ಮಹಿಳೆಯೊಬ್ಬರು ಹೆರಿಗೆಗೆ ದಾಖಲಾಗಿದ್ದು, ಸಂಜೆ ವೇಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲೆ ಉಳಿಸಿಕೊಂಡಿದ್ದು, 10 ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ. ಆದರೆ 9ರ ಸಂಜೆ ಮಹಿಳೆ ನಾಪತ್ತೆಯಾಗಿದ್ದು, ಅಸ್ತತ್ರೆ ಸಿಬ್ಬಂದಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತಿಳಿಸಿದ್ದಾರೆ. ಮಕ್ಕಳ ಘಟಕದ ಅಧಿಕಾರಿಗಳು ಕುಣಿಗಲ್ ಠಾಣೆಯಲ್ಲಿ ದೂರು ದಾಖಲಿಸಿ, ಮಗುವನ್ನು ವಶಕ್ಕೆ ಪಡೆದಿದ್ದಾರೆ.
Advertisement