ತುಮಕೂರು: ತುಮಕೂರಿನ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಬನಶಂಕರಿ ಕೃಪಾಪೋಷಿತ ನಾಟಕ ಮಂಡಳಿ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ಕಲಾ ಬಳಗದ ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಇದೇ ತಿಂಗಳ 13 ರಂದು ಬೆಳಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಲಾನಯನ ಅಭಿವೃದ್ಧಿ ಇಲಾಖೆ ನಿವೃತ್ತ ಜಂಟಿ ಕೃಷಿ ನಿರ್ದೇಶಕ ಡಾ. ಆರ್.ಪಿ. ರಾಮಯ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ತುಮಕೂರು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ. ಅನೂಪ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜು ಆಪಿನಕಟ್ಟೆ ಪಾಲ್ಗೊಳ್ಳಲ್ಲಿದ್ದಾರೆ