ತುಮಕೂರು

ಜನಸಂಖ್ಯಾ ಸ್ಫೋಟದಿಂದ ಸೌಲಭ್ಯ ಕೊರತೆ

Published On :

ಕೊರಟಗೆರೆ: ಜನಸಂಖ್ಯಾ ಸ್ಫೋಟದಿಂದ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗದ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಪ್ರಭಾರ ಅಧ್ಯಕ್ಷ ಎಲ್.ವಿ. ಪ್ರಕಾಶ್ ತಿಳಿಸಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ, ಕೊರಟಗೆರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕು ವೈದ್ಯಾಧಿಕಾರಿ ಡಾ. ಮೋಹನ್‌ದಾಸ್ ಜನಸಂಖ್ಯೆಯನ್ನು ತಡೆಗಟ್ಟಲು ಆರೋಗ್ಯ ಶಿಕ್ಷಣದ ಜೊತೆಗೆ ಸಾಮಾನ್ಯ ಶಿಕ್ಷಣವನ್ನು ನೀಡಬೇಕು ಹಾಗೂ ನವದಂಪತಿಗಳಿಗೆ ಕೌನ್ವಿಲ್ ಅಗತ್ಯವಿದೆ ಎಂದರು. ಸಂಪನ್ಮೂಲ ವ್ಯಕ್ತಿ ಅರವಳಿಕೆ ತಜ್ಞ ಡಾ. ಪ್ರಕಾಶ್, ಶಿಶು ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಮಕೃಷ್ಣ, ಡಾ. ಪ್ರಕಾಶ್, ಬಿ.ಆರ್.ಸಿ., ಶ್ರೀನಿವಾಸ ರೆಡ್ಡಿ, ತಾಪಂ ಸದಸ್ಯರಾದ ಹನುಮಂತರಾಯಪ್ಪ ಸಾಕರಾಜು, ಸರ್ಕಾರಿ ಪದವಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಚಂದ್ರಯ್ಯ, ವಿಜಯಲಕ್ಷ್ಮೀ, ಮಂಜುಳ ಸೇರಿದಂತೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಚಿತ ಚಿಕಿತ್ಸಾ ಶಿಬಿರ ಇಂದು
ಕೊರಟಗೆರೆ: ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ಚಾರಿಬಲ್ ಟ್ರಸ್ಟ್ ವತಿಯಿಂದ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಇಂದು 1001ನೇ ಉಚಿತ ನೇತ್ರಪರೀಕ್ಷೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಮತ್ತು ದಂತ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಟ್ರಸ್ಟ್‌ನ ಇಒ ದಾಸರಹಳ್ಳಿ ರಮೇಶ್ ತಿಳಿಸಿದ್ದಾರೆ. ಈ ಉಚಿತ ನೇತ್ರ ಶಿಬಿರವನ್ನು ರೆಡ್‌ಕ್ರಾಸ್ ಸೊಸೈಟಿ ಅಧ್ಯಕ್ಷ ಇಎಎಸ್ ಅಧಿಕಾರಿ ಡಾ.ಸಿ. ಸೋಮಶೇಖರ್ ಉದ್ಘಾಟಿಸುವರು. ತಜ್ಞ ವೈದ್ಯರಾದ ಡಾ. ಗಣೇಶ್, ಡಾ. ರಂಗಸ್ವಾಮಿ, ಡಾ.ಜೆ.ಕೆ. ಜಯರಾಮ್, ಸುಮನ್‌ಶ್ರೀ, ಟ್ರಸ್ಟ್‌ನ ಅಧ್ಯಕ್ಷ ಶ್ರೀರಂಗಪ್ಪ ಉಪಸ್ಥಿತರಿರುವರು.

ಗುರುಗಳನ್ನು ಗೌರವಿಸಿ
ಶಿರಾ: ಗುರುಗಳಿಗೆ ನಮನ ಸಲ್ಲಿಸುವುದರಿಂದ ಮೋಕ್ಷ ಪ್ರಾಪ್ತಿಯಾಗಲಿದೆ ಎಂದು ಶ್ರೀಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷ ನಂಜಾವಧೂತಸ್ವಾಮಿ ಹೇಳಿದರು.
ತಾಲೂಕಿನ ಪಟ್ಟನಾಯಕನಹಳ್ಳಿಯ ಅನ್ನಪೋರ್ಣೇಶ್ವರಿ ಪ್ರಾರ್ಥನಾ ಮಂದಿರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಭಕ್ತರು ಏರ್ಪಡಿಸಿದ್ದ ಗುರು ನಮನ ಕಾರ್ಯಕ್ರಮದಲ್ಲಿ ಭಕ್ತ ಸಮೂಹಕ್ಕೆ ಆಶೀರ್ವಚನ ನೀಡಿ, ಬಾಲ್ಯಾವಸ್ಥೆಯಲ್ಲಿಯೇ ಉತ್ತಮ ವಿದ್ಯೆ ನೀಡುವ ಮೂಲಕ ಸಮಾಜದಲ್ಲಿ ಮನುಷ್ಯನ ಸ್ಥಿತಿ ಉತ್ತಮ ಪಡಿಸುವುದು ಗುರುವಿನ ಕರ್ತವ್ಯ ಎಂದರು. ಪಿ.ಆರ್. ನಾರಾಯಣ ಆಚಾರ್ಯ ಮಾತನಾಡಿ, ವೇದದಿಂದ ಜ್ಞಾನ ಲಬಿಸಲು ಸಾಧ್ಯ ಎಂದರು. ಪಿ.ಆರ್. ರಮೇಶ್, ಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಮಂಜುಳಾ, ಮಂಜುನಾಥ ಶಾಸ್ತ್ರೀ, ಕೆ.ಎಂ. ಶ್ರೀನಿವಾಸ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.