ಮಂಡ್ಯವರೆಗೆ ವಿದ್ಯುತ್ ರೈಲು
ಮದ್ದೂರು: ಬೆಂಗಳೂರು - ರಾಮನಗರ ನಡುವೆ ವಾರದಲ್ಲಿ ಆರು ದಿನ ಸಂಚರಿಸುವ ವಿದ್ಯುತ್ ಚಾಲಿತ ರೈಲನ್ನು ಮಂಡ್ಯದವರೆಗೆ ವಿಸ್ತರಿಸುವ ಚಿಂತನೆ ನಡೆಸಲಾಗಿದೆ ಎಂದು ರೈಲ್ವೆ ಖಾತೆ ಸಚಿವ ಡಿ.ವಿ.ಸದಾನಂದಗೌಡ ಭಾನುವಾರ ತಿಳಿಸಿದರು.
ಪಟ್ಟಣದ ಹೊರ ವಲಯದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು - ಮೈಸೂರು ಜೋಡಿ ರೈಲು ಮಾರ್ಗ ಪೂರ್ಣಗೊಂಡ ತರುವಾಯ ವಿದ್ಯುತ್ ಚಾಲಿತ ರೈಲನ್ನು ಮದ್ದೂರು ಅಥವಾ ಮಂಡ್ಯದವರೆಗೆ ವಿಸ್ತರಿಸುವ ಕುರಿತು ನಿರ್ಧರಿಸಲಾಗುವುದು ಎಂದರು.
ಈಗಾಗಲೇ ವಿದ್ಯುತ್ ಚಾಲಿತ ರೈಲಿಗೆ ಸಂಬಂಧಿಸಿದಂತೆ ವಿದ್ಯುತ್ ಪರಿಕರಗಳನ್ನು ಅಳವಡಿಸುವ ಕಾರ್ಯ ಬೆಂಗಳೂರಿನಿಂದ ಚನ್ನಪಟ್ಟಣದವರೆಗೆ ಪೂರ್ಣಗೊಂಡಿದೆ. ಜೋಡಿ ರೈಲು ಮಾರ್ಗದ ಕಾಮಗಾರಿ ಮುಗಿದ ತರುವಾಯ ಸುರಕ್ಷತೆಯನ್ನು ಪರಿಶೀಲಿಸಿ ವಿದ್ಯುತ್ ಚಾಲಿತ ರೈಲಿನ ಸಂಚಾರವನ್ನು ವಿಸ್ತರಿಸುವುದಾಗಿ ಹೇಳಿದರು.
ಸಂಚಾರ: ವಿದ್ಯುತ್ ಚಾಲಿತ ರೈಲು ವಾರದಲ್ಲಿ ಆರು ದಿನದಲ್ಲಿ ಪ್ರತಿ ದಿನ ಮೂರು ಬಾರಿ ಮಂಡ್ಯ - ಬೆಂಗಳೂರು ನಡುವೆ ಸಂಚಾರ ಮಾಡಲಿದೆ. ಇದರಿಂದ ಬೆಂಗಳೂರು, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಹಾಗೂ ಮಂಡ್ಯ ಮಾರ್ಗದಲ್ಲಿ ಸಂಚರಿಸುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೈಗೆ ಎತ್ತಿಕೊಂಡಿಲ್ಲ. ಹೊಸ ಯೋಜನೆಗಳನ್ನು ಪ್ರಕಟಿಸಿದರೆ ಹಳೆಯ ಯೋಜನೆಗಳು ಪೂರ್ಣಗೊಳ್ಳುವುದಿಲ್ಲ, ಹೊಸ ಯೋಜನೆಗಳನ್ನು ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದರು. ಸಚಿವ ಸದಾನಂದರಗೌಡ ಅವರ ಆಪ್ತ ಕಾರ್ಯದರ್ಶಿ ಬಿ.ಎನ್.ಕೃಷ್ಣಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಪ್ಪ, ಉಪವಿಭಾಗಾಧಿಕಾರಿ ಶಾಂತ ಹುಲ್ಮನಿ, ತಹಸೀಲ್ದಾರ್ ಮಂಜೇಗೌಡ, ಮನ್‌ಮುಲ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಸದಸ್ಯ ಕೆ.ಆರ್. ಮಹೇಶ್, ಬಿಜೆಪಿ ಮುಖಂಡರಾದ ಕೆ.ಎಂ. ಮಹೇಶ್, ಎಂ.ಎಸ್. ಜಗನ್ನಾಥ್, ಮಲ್ಲಾರಾಜೇ ಅರಸ್, ಹೂತಕೆರೆ ಪ್ರಸನ್ನ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

