ತುಮಕೂರು

ಖಾಸಗಿ ಶಾಲೆ ಬಂದ್ ಮಾಡದಿದ್ದರೆ ಹೋರಾಟ: ಗ್ರಾಮಸ್ಥರ ಎಚ್ಚರಿಕೆ

Published On :

ಕುಣಿಗಲ್: ತಾಲೂಕಿನ ಕೊತ್ತಗೆರೆ ಹೋಬಳಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಸಮೀಪ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಖಾಸಗಿ ಶಾಲೆ (ಕೆ.ಕೆ.ಇಂಟರ್ ನ್ಯಾಷನಲ್ ಸ್ಕೂಲ್) ನಡೆಯುತ್ತಿದೆ.
  ನಿಯಮಬಾಹಿರವಾಗಿ ನಡೆಯುತ್ತಿರುವ ಖಾಸಗಿ ಶಾಲೆ ಮುಚ್ಚಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಸರ್ಕಾರಿ ಶಾಲೆ ಸಂರಕ್ಷಣೆ ನಿಟ್ಟಿನಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರಾದ ಕುಮಾರ್, ನಾಗರಾಜ್, ಮಂಜು ಹಾಗೂ ಇತರರು ಎಚ್ಚರಿಸಿದ್ದಾರೆ.
ಕುರುಡಿಹಳ್ಳಿ ಸಮೀಪದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಕೇವಲ ಶಿಕ್ಷಣ ವ್ಯಾಪಾರೀರಣದ ಉದ್ದೇಶದಿಂದ ಕೆಲವು ಪ್ರಭಾವಿ ವ್ಯಕ್ತಿಗಳು ಶಿಕ್ಷಣ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಪ್ರಸಕ್ತ ಸಾಲಿಗೆ ದಾಖಲಾತಿ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದ್ದರಿಂದ ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಾಲೆಗೆ ಯಾವುದೇ ಅನುಮತಿ ಇಲ್ಲದ ಕಾರಣ ಮಕ್ಕಳನ್ನು ದಾಖಲಿಸದಂತೆ ಸೂಚನೆ ನೀಡಿ ಕೈ ತೊಳೆದುಕೊಂಡಿದ್ದಾರೆ. ಆದರೂ ಖಾಸಗಿ ಶಾಲಾಡಳಿತ ಮಂಡಳಿಯವರು ಶಿಕ್ಷಣ ಇಲಾಖೆಯ ಯಾವುದೇ ಸೂಚನೆ ಲೆಕ್ಕಿಸದೆ ಶಾಲಾ ತರಗತಿ ನಡೆಸುತ್ತಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಯನ್ನೇ ಪ್ರಶ್ನಿಸುವಂತಾಗಿದೆ. ಈಗಾಗಲೇ ಈ ಖಾಸಗಿ ಶಾಲೆ ಸಮೀಪದಲ್ಲಿ ರಾಜ್ಯ ಸರ್ಕಾರದಿಂದ ಮಾದರಿ ಶಾಲೆ ಪ್ರಾರಂಭಕ್ಕೆ ಎಲ್ಲಾ ಸಿದ್ಧತೆಗಳು ನಡೆದಿವೆ. ಸರ್ಕಾರಿ ಶಾಲೆಯಿಂದ ಕೂಗಳತೆ ದೂರದಲ್ಲಿರುವುದರಿಂದ ಶಿಕ್ಷಣ ಇಲಾಖೆ ನಿಯಮಗಳ ಉಲ್ಲಂಘನೆ ಆಗಲಿದೆ. ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಇಲಾಖಾಧಿಕಾರಿಗಳು ಶಾಲೆ ಮುಚ್ಚಿಸಲು ನಿಯಮಾನುಸಾರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ. ಖಾಸಗಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಎಸ್ಸಿ, ಎಸ್ಟಿ ಹಿತರಕ್ಷಣಾ ಸಭೆ 18ಕ್ಕೆ
ಚಿಕ್ಕನಾಯಕನಹಳ್ಳಿ: ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ತಾಲೂಕು ಹಿತರಕ್ಷಣಾ ಸಭೆ ಜು.19ರಂದು ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ರಾಮಯ್ಯ ತಿಳಿಸಿದ್ದಾರೆ.   ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ಕರೆಯಲಾಗಿದ್ದು, ಸಭೆಗೆ ಸಂಬಂದ ಪಟ್ಟ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಮಾಹಿತಿಗಳೊಂದಿಗೆ ಖುದ್ದಾಗಿ ಹಾಜರಾಗಲು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.