ಮಕ್ಕಳಲ್ಲಿ ಜೀವನ ಮೌಲ್ಯಗಳ ತುಂಬಿ
ತುಮಕೂರು: ಇಂದಿನ ಸಮಾಜದಲ್ಲಿ ಜೀವನ ಮೌಲ್ಯಗಳು ಕಾಣೆಯಾಗುತ್ತಿದ್ದು ಮುಂದಿನ ಆರೋಗ್ಯಕರ ಸಮಾಜದ ಉಳಿವಿಗಾಗಿ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ತುಂಬಬೇಕಾಗಿದೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹರಿಕಥಾ ವಿದ್ವಾನ್ ಡಾ. ಲಕ್ಷ್ಮಣದಾಸ್ ತಿಳಿಸಿದರು.
ಅವರು ಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದ ಮಕ್ಕಳೊಡನೆ ಮಾತು-ಕಥೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಾನವೀಯ ಸಂಬಂಧಗಳು ಬಹಳ ದೊಡ್ಡವು. ಆದರೆ ಎಲ್ಲಾ ಕ್ಷೇತ್ರಗಳಲ್ಲೂ ಹಣ ತನ್ನ ಪ್ರಭುತ್ವವನ್ನು ಸಾಧಿಸುತ್ತಲಿದ್ದು ಸಂಬಂಧಗಳು ಜಾಳುಜಾಳಾಗುತ್ತಿವೆ. ಮಕ್ಕಳಿಗೆ ತಂದೆ ತಾಯಿಯರಲ್ಲಿ, ಗುರುಹಿರಿಯರಲ್ಲಿ ಗೌರವ ಭಕ್ತಿ ಶ್ರದ್ಧೆಗಳು ಕಡಿಮೆಯಾಗುತ್ತಿದ್ದು, ಸಂಬಂಧಗಳ ಮಹತ್ವವನ್ನು ಮಕ್ಕಳಿಗೆ ತಿಳಿಹೇಳಬೇಕಾಗಿದೆ. ಆ ನಿಟ್ಟಿನಲ್ಲಿ ಕಾಡಶೆಟ್ಟಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಪ್ರಯತ್ನ ಬಹಳ ಮಹತ್ವವಾದದ್ದು. ಮಕ್ಕಳೊಡನೆ ಮಾತುಕಥೆ ಕಾರ್ಯಕ್ರಮದ ಮೂಲಕ ನಾಡಿನ ಹಿರಿಯರಿಂದ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿರುವುದು ಅಭಿನಂದನೀಯ ಕಾರ್ಯ ಎಂದು ಶಿಕ್ಷಕರನ್ನು ಶ್ಲಾಘಿಸಿದರು. ಮಕ್ಕಳಿಗೆ ಶ್ರವಣಕುಮಾರ, ಶ್ರೀರಾಮ ಲಕ್ಷ್ಮಣರ ಕಥೆ, ಸ್ವಾಮಿ ವಿವೇಕಾನಂದರ ಬಾಲ್ಯ, ಡಿವಿಜಿ ಮತ್ತು ಸರ್ವಜ್ಞರ ವಚನಗಳನ್ನು ಪರಿಚಯಿಸುತ್ತ ಹಾಗೂ ಹಾಡುಗಳನ್ನು ಹಾಡುವ ಮೂಲಕ ಮಕ್ಕಳಿಗೆ ಜೀವನ ಮೌಲ್ಯಗಳನ್ನು ಪರಿಚಯಿಸುವ ಪ್ರಯತ್ನ ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ಎ.ಟಿ. ಶಿವಶಂಕರ್ರವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಅಂಕಗಳಿಕೆಯೇ ಪ್ರಮುಖ ಧ್ಯೇಯವಾಗಿದ್ದು, ಜೀವನ ಪ್ರೀತಿಯನ್ನು ಮೌಲ್ಯಗಳನ್ನು ಕಲಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ. ಆದ್ದರಿಂದ ನಮ್ಮ ಶಾಲೆಯಲ್ಲಿ ಮಕ್ಕಳೊಡನೆ ಮಾತುಕಥೆ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಹಿರಿಯರ ಮಾರ್ಗದರ್ಶನ ಕೊಡಿಸಲಾಗುತ್ತಿದೆ ಎಂದು ತಿಳಿಸಿದರು.
ಶಿಕ್ಷಕರಾದ ನರಸಿಂಹಯ್ಯ, ತೇಜ, ಶಿವರತ್ನ, ನೀಲಾವತಿ, ಸುಂದರಮ್ಮ ಹಾಗೂ ಗ್ರಾಮಸ್ಥರಾದ ಕೆ.ಟಿ. ಮೃತ್ಯುಂಜಯಪ್ಪ ಮುಂತಾದವರು ಉಪಸ್ಥಿತರಿದ್ದರು. ರಶ್ಮಿ ಪ್ರಾರ್ಥಿಸಿ, ಪುನೀತ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

