ಸಾಮಾಜಿಕ ಅರಿವು ಮೂಡಿಸುವುದು ಅತ್ಯಗತ್ಯ
ತುಮಕೂರು: ಗ್ರಾಮೀಣ ಪ್ರದೇಶದ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡುವುದರ ಜತೆಗೆ ಸಾಮಾಜಿಕ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಅಭಿಪ್ರಾಯಪಟ್ಟರು.
ತುಮಕೂರಿನ ಹಳೇ ಡಯಟ್ನಲ್ಲಿ ಏರ್ಪಡಿಸಿದ್ದ ವಿಭಾಗ ಮಟ್ಟದ ಜಿಲ್ಲಾ ಸಂಯೋಜಕರು, ತಾಲೂಕು ಸಂಯೋಜಕರ 3 ದಿನಗಳ ಸಾಕ್ಷರ್ ಭಾರತ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಕರೆತರುವುದು ಸವಾಲಿನ ಕೆಲಸ. ಆದ್ದರಿಂದ ಪ್ರೇರಕರು ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು.
ಕಲಿಕಾ ಕೇಂದ್ರಗಳನ್ನು ನಡೆಸುವ ಸಂದರ್ಭದಲ್ಲಿ ಕಲಿಕಾರ್ಥಿಗಳ ಪೂರ್ವಾಪರ ಹಿನ್ನೆಲೆಯನ್ನು ಅಭ್ಯಾಸ ಮಾಡಿ, ಅವರಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಕಲಿಕಾ ಕೇಂದ್ರಗಳಿಗೆ ಹಾಜರಾಗಿ ಕಲಿಕೆಯಲ್ಲಿ ಆಸಕ್ತಿ ವಹಿಸುತ್ತಾರೆ ಎಂದರು.
ವಿವಿಧ ಇಲಾಖೆಗಳ ಜತೆ ಸಹಕಾರ ಪಡೆದು ಆ ಇಲಾಖೆಗಳ ಸೌಲಭ್ಯಗಳ ಅರಿವನ್ನು ಕಲಿಕಾರ್ಥಿಗಳಿಗೆ ಮೂಡಿಸುವ ಪ್ರಯತ್ನವಾಗಬೇಕು. ಸಾಕ್ಷರತೆ ಎಂದರೆ ಬರೀ ಅಕ್ಷರ ಕಲಿಕೆಯಲ್ಲ. ಸಾಮಾನ್ಯ ಜನತೆಗೆ ಅಕ್ಷರ ಜ್ಞಾನದ ಪ್ರಯೋಜನದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ರಾಜ್ಯ ಸಂಪನ್ಮೂಲ ಕೇಂದ್ರದ ಕಾರ್ಯಕ್ರಮ ಅಧಿಕಾರಿ ಬಸವರಾಜು ದೇವನೂರು ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಸಂಯೋಜಕರು ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸಬೇಕು. ಆಗ ಮಾತ್ರ ತಮ್ಮ ಸೇವೆ ಸಾರ್ಥಕವಾಗುತ್ತದೆಯೆಂದರು.
ಲೋಕ ಶಿಕ್ಷಣ ನಿರ್ದೇಶನಾಲಯದ ಸಹಾಯಕ ನಿರ್ದೇಶಕಿ ವಿಜಯಮ್ಮ ಮಾತನಾಡಿ, ಸಾಕ್ಷರ ಭಾರತ್ ಕಾರ್ಯಕ್ರಮದಲ್ಲಿ ಮಹಿಳೆಯರ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ದಿಸೆಯಲ್ಲಿ ಗ್ರಾಮೀಣ ಭಾಗದ ಎಲ್ಲ ಮಹಿಳೆಯರು ಸಾಕ್ಷರರಾಗಬೇಕು ಎಂದರು.
ರಾಜ್ಯ ಸಂಪನ್ಮೂಲ ಕೇಂದ್ರದ ಕಾರ್ಯಕ್ರಮ ಅಧಿಕಾರಿ ವರದಯ್ಯ ತರಬೇತಿಯ ಉದ್ದೇಶ ತಿಳಿಸಿದರು. ಕಾರ್ಯಕ್ರಮ ಸಹಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು. ತುಮಕೂರು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಿ.ಆರ್. ಹುಚ್ಚಪ್ಪ ಸ್ವಾಗತಿಸಿ, ಮಧುಗಿರಿ ಶೈಕ್ಷಣಿಕ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಂ.ಎಚ್. ಚಂದ್ರಯ್ಯ ವಂದಿಸಿದರು. ತಾಲೂಕು ಸಂಯೋಜಕ ಅರಸಪ್ಪ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

