ತುಮಕೂರು

ಡಿಸೆಂಬರ್‌ವರೆಗೆ ಕಾಂಗ್ರೆಸ್ ಸದಸ್ಯತ್ವ ಅಭಿಯಾನ: ರಫಿಕ್

Published On :

ತುಮಕೂರು: ಮುಂದಿನ ಆರು ತಿಂಗಳ ಕಾಲ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ನೋಂದಾಣಿ ಆಂದೋಲನ ನಡೆಯಲಿದ್ದು ಹೆಚ್ಚು ಜನರನ್ನು ನೋಂದಾಯಿಸುವ ಮೂಲಕ ಪಕ್ಷದ ಬೆಳವಣಿಗೆಗೆ ಸಹಕರಿಸಬೇಕೆಂದು ತುಮಕೂರು ನಗರ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ.
ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಭಾಗವಹಿಸಿ ಮಾನಾಡಿ, ಮೊನ್ನೆ ನಡೆದ ಕೆಪಿಸಿಸಿ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಆರು ತಿಂಗಳ ಕಾಲ ಅಂದರೆ ಜುಲೈನಿಂದ ಡಿಸೆಂಬರ್ ಅಂತ್ಯದವರಗೆ ಸದಸ್ಯತ್ವ ನೋಂದಣಿ ಅಭಿಯಾನ ನಡೆಸುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.
ತುಮಕೂರು ನಗರದ ಸದಸ್ಯತ್ವ ನೋಂದಣಿ ಜವಾಬ್ದಾರಿಯನ್ನು ಎಲ್ಲಾ ಬ್ಲಾಕ್ ಕಾಂಗ್ರೆಸ್ ಮತ್ತು ವಾರ್ಡ್‌ಗಳ ಮುಖ್ಯಸ್ಥರೊಂದಿಗೆ ಸೇರಿ ಹೆಚ್ಚಿನ ಸದಸ್ಯತ್ವ ನೋಂದಣಿಗೆ ಒತ್ತು ನೀಡುವುದಲ್ಲದೆ ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಕಳೆದ ಸಾಲಿಗಿಂತ ಎರಡು ಪಟ್ಟು ಹೆಚ್ಚು ಸದಸ್ಯರನ್ನು ಪಕ್ಷಕ್ಕೆ ನೋಂದಾಯಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಪಿ ಅಹಮದ್ ಮಾತನಾಡಿ, ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುವ ಯುವಕರನ್ನು ಪಕ್ಷಕ್ಕೆ ಸೇರ್ಪಡೆಯಾಗುವಂತೆ ನೋಡಿಕೊಳ್ಳಬೇಕೆಂದರು. ಸಭೆಯಲ್ಲಿ ಮೇಯರ್ ಗೀತಾ ರುದ್ರೇಶ್, ಮುಖಂಡರಾದ ನಿಂಗಪ್ಪ, ಬಿ. ಲಕ್ಕಪ್ಪ, ಗಾಯಿತ್ರಿ ಬಲರಾಮರಾಜು, ಶಿವಮೂರ್ತಿ, ಚಿನ್ನಯಲ್ಲಪ್ಪರೆಡ್ಡಿ, ಟಿ.ಬಿ. ಮಲ್ಲೇಶ್, ಜಿಪಂ ಸದಸ್ಯ ಕೆಂಚಮಾರಯ್ಯ, ಆಟೋ ರಾಜು, ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.