ತುಮಕೂರು

ಅಂಗಡಿ ಪರವಾನಗಿ ರದ್ದು ಖಂಡಿಸಿ ಪ್ರತಿಭಟನೆ

Published On :

ತುಮಕೂರು: ಗುಬ್ಬಿ ತಾಲೂಕಿನ ಕೋಣಿಮಾಚೇನಹಳ್ಳಿ ಜೈ ಭಾರತ್ ಯುವಕ ಸಂಘದ ನ್ಯಾಯಬೆಲೆ ಅಂಗಡಿ ರದ್ದುಪಡಿಸಿರುವುದನ್ನು ಖಂಡಿಸಿ ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಕೋಣನಕೆರೆ, ಬ್ಯಾಡರ ಮಲ್ಲೇನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಕೆಲ ಗ್ರಾಮಸ್ಥರು ಪರವಾನಗಿ ರದ್ದು ಖಂಡಿಸಿ ಪ್ರತಿಭಟನೆ ನಡೆಸಿದರು. ಸುಮಾರು 25 ವರ್ಷಗಳಿಂದ ಕೋಣಿಮಾಚೇನಹಳ್ಳಿ ಗ್ರಾಮದ ಜೈ ಭಾರತ್ ಯುವಕ ಸಂಘದ ನ್ಯಾಯಬೆಲೆ ಅಂಗಡಿಯಲ್ಲೇ ಅಕ್ಕಿ, ಗೋಧಿ, ಸಕ್ಕರೆ, ಸೀಮೆಎಣ್ಣೆ ಪಡೆಯುತ್ತಿದ್ದೆವು. ಸರ್ಕಾರ ನಿಗಧಿ ಪಡಿಸಿದ ಬೆಲೆಯಲ್ಲಿಯೇ ಇಲ್ಲಿ ಎಲ್ಲರಿಗೂ ಪಡಿತರ ಲಭ್ಯವಾಗುತ್ತಿತ್ತು. ಆದರೆ ಕೆಲವು ರಾಜಕೀಯ ಶಕ್ತಿಗಳ ಕುತಂತ್ರದಿಂದಾಗಿ ಇಲ್ಲಿನ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು ಮಾಡಿರುವುದರ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವ ಮೂಲಕ ಸುತ್ತಮುತ್ತಲ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ, ಮಾಹಿತಿ ಪಡೆದ ಅಪರ ಜಿಲ್ಲಾಧಿಕಾರಿಗಳು, ತಮಗೆ ಈ ಹಿಂದೆ ನೀಡುತ್ತಿದ್ದ ನ್ಯಾಯಬೆಲೆ ಅಂಗಡಿಯಲ್ಲಿಯೇ ಪಡಿತರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳುವುದು. ಅಲ್ಲಿಯ ವರೆಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಗ್ರಾಮಸ್ಥರಾದ ಸಿದ್ದಗಂಗಯ್ಯ, ಶಿವಣ್ಣ, ಬಸವರಾಜು, ಸಿದ್ದರಾಮಣ್ಣ, ಶಾಂತಮ್ಮ, ಶಾಲಿನಿ, ಗಿರಿಜಮ್ಮ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.